ಬಂಗಾಳ ರಾಜಕೀಯದ ‘ಚಾಣಕ್ಯ’, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಇನ್ನಿಲ್ಲ

ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ, ಮಾಜಿ ರೈಲ್ವೆ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಮುಕುಲ್ ರಾಯ್ (71) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

author-image
Ganesh Kerekuli
Mukul Roy (1)
Advertisment

ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ, ಮಾಜಿ ರೈಲ್ವೆ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಮುಕುಲ್ ರಾಯ್ (71) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಒಂದಾನೊಂದು ಕಾಲದಲ್ಲಿ ಟಿಎಂಸಿ ಪಕ್ಷದಲ್ಲಿ ಮಮತಾ ಬ್ಯಾನರ್ಜಿ ನಂತರದ 'ಎರಡನೇ ಕಮಾಂಡ್' (Second in Command) ಎಂದು ಗುರುತಿಸಿಕೊಂಡಿದ್ದ ಮುಕುಲ್ ರಾಯ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಪುತ್ರನಿಂದ ದೃಢೀಕರಣ

ತಂದೆಯ ನಿಧನದ ಕುರಿತು ಮಾಹಿತಿ ನೀಡಿರುವ ಪುತ್ರ ಸುಭ್ರಾಂಶು ರಾಯ್, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿ ಸುಮಾರು 1.30ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಯಿತು (Massive Heart Attack). ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದ ಅತೀ ದೊಡ್ಡ EV Ready ಎಕ್ಸ್​​ಪೋ.. ಇವತ್ತೇ ಕೊನೆ ದಿನ, ಈಗಲೇ ಭೇಟಿ ನೀಡಿ..!

Mukul Roy

ಬಂಗಾಳ ರಾಜಕೀಯದ ಚಾಣಕ್ಯ

ಮುಕುಲ್ ರಾಯ್ ಅವರನ್ನು ‘ಬಂಗಾಳ ರಾಜಕೀಯದ ಚಾಣಕ್ಯ’ ಎಂದು ಕರೆಯಲಾಗುತ್ತಿತ್ತು. ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು. ಆಗಾಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಮುಕುಲ್ ರಾಯ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸ್ಥಾಪಕ ಸದಸ್ಯರಲ್ಲಿ ಒಬ್ಬರು.

ಯುಪಿಎ-2 ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿ ಹಾಗೂ ಹಡಗು ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಆರಂಭದಲ್ಲಿ ಅವರು ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. 2017 ರಲ್ಲಿ ಟಿಎಂಸಿ ನಾಯಕರೊಂದಿಗಿನ ಭಿನ್ನಾಭಿಪ್ರಾಯದಿಂದ ಪಕ್ಷ ತೊರೆದು ಬಿಜೆಪಿ ಸೇರಿದ್ದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕೃಷ್ಣನಗರ ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ (MLA) ಆಯ್ಕೆಯಾಗಿದ್ದರು.

ಬಿಜೆಪಿ ಶಾಸಕರಾಗಿ ಆಯ್ಕೆಯಾದ ನಂತರವೂ ಅವರು ಮರಳಿ ಟಿಎಂಸಿಗೆ ಸೇರ್ಪಡೆಯಾಗಿದ್ದರು. ಆದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಹಲವು ರಾಜಕೀಯ ಏರಿಳಿತಗಳನ್ನು ಕಂಡಿದ್ದ ಮುಕುಲ್ ರಾಯ್ ಅವರ ಅಗಲಿಕೆ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಒಂದು ಶಕೆಯ ಮುಕ್ತಾಯದಂತಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿಗೆ ಬಿಗ್ ಶಾಕ್: ಡಿ. ರೂಪಾ ಸಲ್ಲಿಸಿದ್ದ ಮಾನನಷ್ಟ ಕೇಸ್​​ಗೆ ಹೊಸ ತಿರುವು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Mukul Roy Passes Away
Advertisment