/newsfirstlive-kannada/media/post_attachments/wp-content/uploads/2025/01/Neeraj-Chopra-Marriage.jpg)
ಭಾರತದ ಸ್ಟಾರ್ ಜಾವೆಲಿನ್ ಥ್ರೋ ಅಥ್ಲೀಟ್ ಮತ್ತು ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ನೀರಜ್ ಚೋಪ್ರಾ ಮದುವೆ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ನೀರಜ್, ಜೀವನದಲ್ಲಿ ಹೊಸ ಅಧ್ಯಾಯ ಶುರು ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನೀರಜ್-ಹಿಮಾನಿ ಎಂಬ ಕ್ಯಾಪ್ಷನ್ ನೀಡಿ ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹುಡುಗಿ ಯಾರು ಅನ್ನೋದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
2 ಪದಕ ಗೆದ್ದ ಏಕೈಕ ಭಾರತೀಯ ಕ್ರೀಡಾಪಟು
ಮೊದಲು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಚೋಪ್ರಾ ನಂತರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಈ ಮೂಲಕ ಅಥ್ಲೆಟಿಕ್ಸ್ನಲ್ಲಿ ಸತತ 2 ಪದಕ ಗೆದ್ದ ಭಾರತೀಯ ಕ್ರೀಡಾಪಟು ಎನಿಸಿಕೊಂಡಿದ್ದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ 89.45 ಮೀಟರ್ ದೂರ ಜಾವೆಲಿನ್ ಎಸೆದಿದ್ದರು. ನೀರಜ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದರು. ಇದಕ್ಕೂ ಮುನ್ನ ನೀರಜ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.
ಇದನ್ನೂ ಓದಿ:ಸ್ಟಾರ್ ಕ್ರಿಕೆಟರ್ಗೆ ಜಾಕ್ಪಾಟ್; ಪಂಜಾಬ್ ಕಿಂಗ್ಸ್ ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ