/newsfirstlive-kannada/media/post_attachments/wp-content/uploads/2025/06/Neeraj-Chopra.jpg)
Neeraj Chopra.. ದೋಹಾದಲ್ಲಿ ನಡೆದ ಡೈಮಂಡ್ ಲೀಗ್ ಕೂಟದಲ್ಲಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬರೋಬ್ಬರಿ 88.16 ಮೀಟರ್ ಭರ್ಜಿ ಎಸೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಇದನ್ನೂ ಓದಿ: Yoga Day: ನೀವು ಸ್ಲಿಮ್ ಅಂಡ್ ಫಿಟ್ ಆಗಿ ಕಾಣಬೇಕೇ? ಯೋಗಾಸನದಿಂದ ಇರೋ ಲಾಭಗಳೇನು?
ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್ನಲ್ಲಿ ಪ್ರಶಸ್ತಿಗೆ ಮುಡಿಗೇರಿಸಿಕೊಂಡಿದ್ದಾರೆ. ವಿಶೇಷ ಎಂದರೆ ಜರ್ಮನಿಯ ಚಾಂಪಿಯನ್ ಜಾವೆಲಿನ್ ಎಸೆತಗಾರ ಜೂಲಿಯನ್ ವೆಬರ್ ಅವರನ್ನು ಹಿಂದಿಕ್ಕುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಜರ್ಮನಿಯ ಜೂಲಿಯನ್ ವೆಬರ್ (Julian Weber) 87.88 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ಬ್ರೆಜಿಲ್‌ನ ಲೂಯಿಜ್ ಮೌರಿಸಿಯೊ ಡ ಸಿಲ್ವಾ (Luiz Maurício da Silva) 86.62 ಮೀಟರ್ ಎಸೆಯುವ ಮೂಲಕ ಮೂರನೇ ಸ್ಥಾನ ಪಡೆದರು. ಕೆಶಾರ್ನ್ ವಾಲ್ಕಾಟ್ ಮತ್ತು ಆಂಡರ್ಸನ್ ಪೀಟರ್ಸ್ ಸೇರಿದಂತೆ ಇತರ ಯಾವುದೇ ಎಸೆತಗಾರರು 82 ಮೀಟರ್ ಗಡಿಯನ್ನು ದಾಟಲು ಸಾಧ್ಯವಾಗಲಿಲ್ಲ.
ಬರೋಬ್ಬರಿ ಎಂಟು ವರ್ಷಗಳ ಬಳಿಕ ಪ್ಯಾರಿಸ್ ಡೈಮಂಡ್ ಲೀಗ್ಗೆ ಮರಳಿದ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ 88.16 ಮೀಟರ್ ದೂರ ಎಸೆದಿದ್ದಾರೆ. ಎರಡನೇ ಪ್ರಯತ್ನದಲ್ಲಿ 85.10 ಮೀಟರ್, ತನ್ನ ಅಂತಿಮ ಪ್ರಯತ್ನದಲ್ಲಿ 82.89 ಮೀಟರ್ ದೂರಕ್ಕೆ ಎಸದರು. ಆದ್ರೆ ಜೂಲಿಯನ್ ವೆಬರ್ ನೀರಜ್ ಚೋಪ್ರಾ ಅವರ 88.16 ಮೀಟರ್ ಗುರಿಯನ್ನು ದಾಟಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ನೀರಜ್ ಚೋಪ್ರಾ ಮೊದಲ ಎಸೆತದಲ್ಲಿ ಕ್ರಮಿಸಿದ 88.16 ಮೀಟರ್ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇನ್ನೂ, ನೀರಜ್ ಚೋಪ್ರಾ ಅವರು ಜೂನ್ 24ರಂದು ಜೆಕ್ ಗಣರಾಜ್ಯದ ಒಸ್ಟ್ರಾವಾದಲ್ಲಿ ನಡೆಯುವ ಗೋಲ್ಡನ್ ಸ್ಪೈಕ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಸ್ಪರ್ಧಿಸಲಿದ್ದಾರೆ. ನಂತರ, ಜುಲೈ 4ರಂದು ನೀರಜ್ ಚೋಪ್ರಾ ಅವರ ಕ್ಲಾಸಿಕ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಎರಡು ಸ್ಪರ್ಧೆಗಳಿಗೂ ಮುನ್ನ ಪ್ಯಾರಿಸ್ ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಗೆದ್ದು ಬಿಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ