newsfirstkannada.com

NEET ಪರೀಕ್ಷೆಯ ರಿಸಲ್ಟ್‌ಗೆ ಪ್ರಾಣ ಬಿಟ್ಟ ವಿದ್ಯಾರ್ಥಿ; ಮಗ ಸತ್ತ ಮರುದಿನವೇ ತಂದೆ ಸಾವು

Share :

Published August 14, 2023 at 6:07pm

    ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ವಿರುದ್ಧ ಭುಗಿಲೆದ್ದ ಆಕ್ರೋಶ

    NEET ಎಕ್ಸಾಮ್‌ ವಿರುದ್ಧ ಸಮರ ಸಾರಿದ ಸಿಎಂ ಎಂ.ಕೆ ಸ್ಟಾಲಿನ್

    ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡ್ಡಿಯಾಗಿರುವ ನೀಟ್​ ರದ್ದಿಗೆ ಹೋರಾಟ

ಚೆನ್ನೈ: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪಾಸ್​​ ಆಗದಿದ್ದಕ್ಕೆ​ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮಗ ಸಾವನ್ನಪ್ಪಿದ ಒಂದು ದಿನದ ಬಳಿಕ ಆತನ ತಂದೆ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಜಗದೀಶ್ವರನ್ (19), ಸೆಲ್ವಶೇಖರ್ ಮೃತ ದುರ್ದೈವಿಗಳು.

ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಮೃತ ಯುವಕನ ತಂದೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸ್ ತನಿಖೆ ಪ್ರಕಾರ ಮೃತ ವಿದ್ಯಾರ್ಥಿ ಜಗದೀಶ್ವರನ್ 2022ರಲ್ಲಿ 12ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ. ಆದರೆ ಸತತವಾಗಿ ಎರಡು ಬಾರಿ ಬರೆದ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಕಡಿಮೆ ಬಂದ ಫಲಿತಾಂಶದಿಂದ ತೀವ್ರ ಮನನೊಂದ ಜಗದೀಶ್ವರನ್ ಕಳೆದ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ಬಳಿಕ ಜಗದೀಶ್ವರನ್ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಮಗನ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಮನನೊಂದ ತಂದೆ ಸೆಲ್ವಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮನವಿ

ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿ ಹಾಗೂ ಆತನ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಯಾವುದೇ ಸಂದರ್ಭದಲ್ಲೂ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುವ ನಿರ್ಧಾರವನ್ನು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ನಿಮ್ಮ ಬೆಳವಣಿಗೆಗೆ ಅಡ್ಡಿಯಾಗಿರುವ NEET ಪರೀಕ್ಷೆಯನ್ನು ರದ್ದುಗೊಳಿಸಲಾಗುವುದು. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಕಾನೂನು ಉಪಕ್ರಮದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ತಂದೆ ಹಾಗೂ ಮಗನ ಸಾವಿಗೆ ಮುಖ್ಯಮಂತ್ರಿ ಎಂ.ಕೆ .ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

NEET ಪರೀಕ್ಷೆಯ ರಿಸಲ್ಟ್‌ಗೆ ಪ್ರಾಣ ಬಿಟ್ಟ ವಿದ್ಯಾರ್ಥಿ; ಮಗ ಸತ್ತ ಮರುದಿನವೇ ತಂದೆ ಸಾವು

https://newsfirstlive.com/wp-content/uploads/2023/08/death-4.jpg

Load More