newsfirstkannada.com

ನೇಹಾ ಹಿರೇಮಠ್ ಕೊಲೆ ಕೇಸ್‌ಗೆ ಮೇಜರ್ ಟ್ವಿಸ್ಟ್‌.. ಕೋರ್ಟ್​ನಿಂದ ಮಹತ್ವದ ಆದೇಶ; ಏನದು?

Share :

Published April 24, 2024 at 4:31pm

  1ನೇ ಅಧಿಕ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯ ಮಹತ್ವದ ಆದೇಶ

  ರಾಜ್ಯವನ್ನೇ ಬೆಚ್ಚಿ ಬೀಳಿಸಿರೋ ನೇಹಾ ಹಿರೇಮಠ ಕೇಸ್​ಗೆ ಬಿಗ್​ ಟ್ವಿಸ್ಟ್

  ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಕೇಸ್​​

ಹುಬ್ಬಳ್ಳಿ: ಕಾಂಗ್ರೆಸ್‌ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿ ಫಯಾಜ್​​ನನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.

ನೇಹಾ ಹಿರೇಮಠ ಕೊಲೆ ಕೇಸ್​​​ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿವಿಧ ಜಿಲ್ಲೆಗಳಲ್ಲಿ ನೇಹಾ ಹಿರೇಮಠಗೆ ನ್ಯಾಯ ಸಿಗಬೇಕು ಅಂತಾ ಪ್ರತಿಭಟನೆಗೆ ಮುಂದಾಗಿದ್ದರು. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆಯಾಗಲಿ ಎನ್ನುವ  ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದಾದ ಬೆನ್ನಲ್ಲೇ ಒಂದನೇ ಅಧಿಕ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ: ನೇಹಾ ಹಿರೇಮಠ ಕೇಸ್ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸ್ತೇವೆ -ಸುರ್ಜೇವಾಲಾ ಭರವಸೆ

ನೇಹಾಳನ್ನು ಕೊಲೆ ಮಾಡಿದ ಆರೋಪಿಯನ್ನು 15 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಸಿಐಡಿ ಪೊಲೀಸರು ಕೇಳಿದ್ದರು. ಹೀಗಾಗಿ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಫಯಾಜ್​ನನ್ನು 6 ದಿನ ಪೊಲೀಸ್ ಕಸ್ಟಡಿಗೆ ನ್ಯಾಯಾಧೀಶ ನಾಗೇಶ್ ನಾಯ್ಕ ನೀಡಿದ್ದಾರೆ. ಕೋರ್ಟ್ ಆದೇಶ ಕೊಟ್ಟ ಕೂಡಲೇ ಸಿಇಡಿ ಪೊಲೀಸರು ಆರೋಪಿಯನ್ನು ಇಂದೇ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜೈಲಿನಿಂದ ನೇರವಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.  ಇದಾದ ಬಳಿಕ ಘಟನೆ ನಡೆದ ಜಾಗದಲ್ಲಿ ಸ್ಥಳ ಮಹಜರು ಮಾಡಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇಹಾ ಹಿರೇಮಠ್ ಕೊಲೆ ಕೇಸ್‌ಗೆ ಮೇಜರ್ ಟ್ವಿಸ್ಟ್‌.. ಕೋರ್ಟ್​ನಿಂದ ಮಹತ್ವದ ಆದೇಶ; ಏನದು?

https://newsfirstlive.com/wp-content/uploads/2024/04/Fayaz-Neha-Hiremath.jpg

Load More