/newsfirstlive-kannada/media/post_attachments/wp-content/uploads/2025/06/rcb5.jpg)
ಐಪಿಎಲ್-18ರ ಆವೃತ್ತಿಯ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಅಂತಿಮ ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.
ಇದನ್ನೂ ಓದಿ:RCBಗೆ ಶುಭ ಹಾರೈಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.. ತಂಡದ ಬಗ್ಗೆ ಏನು ಹೇಳಿದರು?
ಈ ಹಿನ್ನೆಲೆಯಲ್ಲಿ ರಜತ್ ಪಾಟೀದಾರ್ ನಾಯಕತ್ವದ ಆರ್‌ಸಿಬಿ ತಂಡದ ಗೆಲುವಿಗೆ ಅಭಿಮಾನಿಗಳು ಈಗಾಗಲೇ ಪ್ರಾರ್ಥನೆ ಆರಂಭಿಸಿದ್ದಾರೆ. ಹಾಗೆಯೇ ಸ್ಯಾಂಡಲ್‌ವುಡ್ ತಾರೆಯರು ಕೂಡ ಈ ಸಲ ಕಪ್ ನಮ್ಮದೇ ಎಂದು ಪೋಸ್ಟ್ ಹಾಕುವ ಮೂಲಕ ಶುಭ ಹಾರೈಸುತ್ತಿದ್ದಾರೆ.
ಮತ್ತೊಂದು ಕಡೆ ನೇಪಾಳದಲ್ಲಿ ಆರ್‌ಸಿಬಿ ಅಭಿಮಾನಿಗಳು ಭರ್ಜರಿ ಸೆಲೆಬ್ರೇಶನ್ ನಡೆಸುತ್ತಿದ್ದಾರೆ. ಆರ್‌ಸಿಬಿ ಜೆರ್ಸಿ ಧರಿಸಿಕೊಂಡು ದೇವರ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮತ್ತೊಂದು ಕಡೆ ಮದುವೆ ಮಂಟಪದಲ್ಲಿ ನೇಪಾಳದ ನವ ಜೋಡಿ RCB ಜೆರ್ಸಿ ಹಿಡಿದು ಈ ಸಲ ಕಪ್ ನಮ್ದೇ ಅಂತ ಕೂಗಿ ಹೇಳಿದ್ದಾರೆ.
ಇನ್ನೂ, ಪಂಜಾಬ್ ಹಾಗೂ ಆರ್‌ಸಿಬಿ ನಡುವಿನ ಫೈನಲ್ ಪಂದ್ಯ ಇಂದು ಸಂಜೆ 7:30ಕ್ಕೆ ನಡೆಯಲಿದೆ. ಫೈನಲ್ ಪಂದ್ಯವಾಗಿದ್ದರಿಂದ ಈಗಾಗಲೇ ಟಿಕೆಟ್ಗಳೆಲ್ಲಾ ಸೋಲ್ಡ್ ಔಟ್ ಆಗಿವೆ. ದುಬಾರಿ ಬೆಲೆಗಳಲ್ಲಿ ಐಪಿಎಲ್ ಟಿಕೆಟ್ ಮಾರಾಟ ಆಗಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವುದರಿಂದ ನರೇಂದ್ರ ಮೋದಿ ಸ್ಟೇಡಿಯಂ ಎಲ್ಲ ಭರ್ತಿಯಾಗಲಿದೆ. 1,30,000 ಜನ ಒಂದೇ ಬಾರಿಗೆ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಣೆ ಮಾಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ