newsfirstkannada.com

ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯಿದೆ ಜಾರಿ; ಏನಿರಲಿದೆ? ನೀವು ಓದಲೇಬೇಕಾದ ಸ್ಟೋರಿ!

Share :

Published August 24, 2024 at 6:12am

    ಮುಂದಿನ 6 ತಿಂಗಳಲ್ಲಿ ಜಾರಿಗೆ ಬರಲಿದೆ ಹೊಸ ಆದಾಯ ತೆರಿಗೆ ಕಾಯಿದೆ

    1961ರ ಆದಾಯ ತೆರಿಗೆ ಕಾಯಿದೆ ಬದಲಿಗೆ ಹೊಸ ಕಾಯಿದೆ ಜಾರಿಯಾಗಲಿದೆ

    ಈ ಬಗ್ಗೆ ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ!

ನವದೆಹಲಿ: ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯಿದೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. 1961ರ ಆದಾಯ ತೆರಿಗೆ ಕಾಯಿದೆ ತೆರೆಮರೆಗೆ ಸರಿಯಲಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಲು ಹೊಸ ಕಾಯಿದೆ ಜಾರಿಗೆ ತರಲಾಗುತ್ತಿದೆ. ಹೊಸ ಕಾಯಿದೆಯ ಕೆಲವು ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಸುಲಭವಾಗಲಿದೆ. ಹೊಸ ಕಾಯ್ದೆಯಲ್ಲಿ ಸ್ಪಷ್ಟ ಸರಳ ಭಾಷೆಯಲ್ಲಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಡು ರಸ್ತೆಯಲ್ಲಿ ಕಂತೆ ಕಂತೆ ನೋಟುಗಳ ಸುರಿಮಳೆಗೈದ ಖ್ಯಾತ ಯೂಟ್ಯೂಬರ್ -Video

ತೆರಿಗೆ ಪಾವತಿದಾರರಲ್ಲಿ ಭಯ ಮತ್ತು ಆತಂಕ ಹೋಗಲಾಡಿಸುವ ನಿಟ್ಟಿನಲ್ಲಿ ಸರಳ ಭಾಷೆಯಲ್ಲಿ ವ್ಯವಹರಿಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ. ಆದಾಯ ತೆರಿಗೆ ದಿನಾಚರಣೆಯಲ್ಲಿ ಭಾಗಿಯಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿಮ್ಮ ಅಧಿಕಾರವನ್ನು ಎಚ್ಚರಿಕೆಯಿಂದ ಬಳಸಿ ಎಂದಿದ್ದಾರೆ. ತೆರಿಗೆ ಪಾವತಿದಾರರಿಗೂ ಯಾವುದೇ ರೀತಿಯಲ್ಲಿ ಕಿರುಕುಳ ಆಗದಂತೆ ವರ್ತಿಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Breaking: ಅನಿಲ್ ಅಂಬಾನಿಗೆ ಬಿಗ್​ ಶಾಕ್.. ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್

ಇನ್ನು ಇದೇ ವೇಳೆ ಮಾತನಾಡಿದ ಸಿಬಿಡಿಟಿ ಅಧ್ಯಕ್ಷ ರವಿ ಅಗರವಾಲ್ ವಿವಾದಗಳನ್ನು ತಗ್ಗಿಸಿ, ತೆರಿಗೆ ಪಾವತಿಯಲ್ಲಿ ಖಚಿತತೆ ನೀಡಲು ಹೊಸ ಕಾಯಿದೆ ಜಾರಿಗೆ ತರಲಾಗಿದ್ದು. ಇದು ಸುಲಭವಾಗಿ ಓದಲು ಅರ್ಥ ಮಾಡಿಕೊಳ್ಳಲು ಅನುಕೂಲವಾಗುದೇ ಬದಲಾವಣೆ ಹಿಂದಿರುವ ಮೂಲ ಉದ್ದೇಶ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯಿದೆ ಜಾರಿ; ಏನಿರಲಿದೆ? ನೀವು ಓದಲೇಬೇಕಾದ ಸ್ಟೋರಿ!

https://newsfirstlive.com/wp-content/uploads/2024/05/Nirmala-Sitaraman-Bjp.jpg

Load More