ಕುಡುಕ ತಂದೆಯ ಚಿತ್ರಹಿಂಸೆ.. ಮದುವೆ ವಿವಾದಕ್ಕೆ ಚೈತ್ರಾ ಕುಂದಾಪುರ ಕೊಟ್ರು ಹೊಸ ಟ್ವಿಸ್ಟ್; ಏನದು?

author-image
Veena Gangani
Updated On
ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕುಂದಾಪುರ ತಂದೆ; ಮಗಳ ವಿರುದ್ಧವೇ ಸ್ಫೋಟಕ ಆರೋಪ
Advertisment
  • ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರ್ತಾರೆ ಚೈತ್ರಾ ಕುಂದಾಪುರ
  • ಪ್ರೀತಿಸಿದ ಹುಡುಗ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚೈತ್ರಾ
  • ಮಗಳು ಚೈತ್ರಾ ಕುಂದಾಪುರ ಬಗ್ಗೆ ತಂದೆ ಮಾಡಿರೋ ಆರೋಪವೇನು?

ಚೈತ್ರಾ ಕುಂದಾಪುರ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಮೊನ್ನೆಯಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಪ್ರೀತಿಸಿದ ಹುಡುಗ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದ್ರೇ ತಮ್ಮ ಮದುವೆಗೆ ಖುದ್ದು ತಂದೆಯನ್ನೇ ಕರೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಖುದ್ದು ಈ ಬಗ್ಗೆ ಮಾಧ್ಯಮಗಳ ಮುಂದೆ ಬಂದು ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಮಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು.. ಮದುವೆ ಬೆನ್ನಲ್ಲೇ ತಂದೆಯಿಂದ ಸ್ಫೋಟಕ ಹೇಳಿಕೆ

publive-image

ಹೌದು, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.

publive-image

ಚೈತ್ರಾ ಬಿಗ್​ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್​ಬಾಸ್​ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಅಂತ ಹೇಳಿದ್ದಾರೆ.

publive-image

ಇನ್ನೂ, ತಂದೆಯ ಮಾತು ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್ ಮಾಡಿಕೊಂಡಿದ್ದಾರೆ. ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment