/newsfirstlive-kannada/media/post_attachments/wp-content/uploads/2025/02/Rachin_Ravindra_VIRAT.jpg)
ಕನ್ನಡಿಗ ರಚಿನ್ ರವೀಂದ್ರ ಅವರ ಆಕರ್ಷಕ ಶತಕದ ನೆರವಿನಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ 5 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.
ಪಾಕಿಸ್ತಾನದ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಕ್ಯಾಪ್ಟನ್ ಟಾಮ್ ಲಾಥಮ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್ಗೆ ಆಗಮಿಸಿದ ಬಾಂಗ್ಲಾ ಪರ ಓಪನರ್ಸ್ ಉತ್ತಮ ಆರಂಭವೇನೋ ಪಡೆದುಕೊಂಡರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ವೈಫಲ್ಯದ ಕಾರಣ 50 ಓವರ್ಗಳಲ್ಲಿ 9 ವಿಕೆಟ್ಗೆ 236 ರನ್ ಮಾತ್ರ ಗಳಿಸಿತು.
ಇದನ್ನೂ ಓದಿ: ಕೇವಲ 9 ರನ್ ಗಳಿಸದ RCB.. ತವರಲ್ಲಿ ಕ್ಯಾಪ್ಟನ್ ಸ್ಮೃತಿ ಮಂದಾನಗೆ ಭಾರೀ ಮುಖಭಂಗ
ಈ ಟಾರ್ಗೆಟ್ ಬೆನ್ನು ಬಿದ್ದ ನ್ಯೂಜಿಲೆಂಡ್ ಆಟಗಾರರು ಆರಂಭದಲ್ಲೇ ದೊಡ್ಡ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್ಗೆ ಆಗಮಿಸಿದ ಕನ್ನಡಿಗ ರಚಿನ್ ರವೀಂದ್ರ ಪಂದ್ಯದ ದಿಕ್ಕನ್ನೇ ಬದಲಿಸಿದರು. 105 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್ ಸಮೇತ 112 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಕೊನೆಗೆ ನ್ಯೂಜಿಲೆಂಡ್ 46.1 ಓವರ್ನಲ್ಲಿ 5 ವಿಕೆಟ್ಗೆ 240 ರನ್ ಗಳಿಸಿ ಗೆಲುವು ಪಡೆದು ಸೆಮಿಫೈನಲ್ಗೆ ಪ್ರವೇಶಿಸಿದೆ.
ನ್ಯೂಜಿಲೆಂಡ್ ಜಯದೊಂದಿಗೆ ಟೂರ್ನಿಯಿಂದಲೇ ಬಾಂಗ್ಲಾದೇಶ ಮತ್ತು ಅತಿಥೇಯ ಪಾಕಿಸ್ತಾನ ನಿರ್ಗಮಿಸಿದೆ. ಗ್ರೂಪ್- ಎ ನಲ್ಲಿರುವ ಭಾರತ ಹಾಗೂ ನ್ಯೂಜಿಲೆಂಡ್ ತಲಾ ಎರಡು ಪಂದ್ಯಗಳನ್ನು ಗೆದ್ದು ಸೆಮಿಸ್ಗೆ ಎಂಟ್ರಿ ಕೊಟ್ಟಿವೆ. ಗ್ರೂಪ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಪಂದ್ಯವಾಡಲಿದ್ದು ಇದು ಯಾವುದೇ ಪರಿಣಾಮ ಬೀರುವುದಿಲ್ಲ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ