ಬರ್ತ್ಡೇಗೆ ಹೋದಾಗ ಕಾದು ಕೂತಿದ್ದ ಯಮರಾಯ
ವಿಜಯಪುರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ
ಮಕ್ಕಳ ಕಳೆದುಕೊಂಡು ಕಣ್ಣೀರಲ್ಲಿ ಮುಳುಗಿದ ಕುಟುಂಬ
ವಿಜಯಪುರ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನವ ವಿವಾಹಿತರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ನಡೆದಿದೆ.
ಹೊನಮಲ್ಲ ತೇರದಾಳ (31), ಪತ್ನಿ ಗಾಯತ್ರಿ (24) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊನಮಲ್ಲಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಮೇ 22 ರಂದು ಹೊನಮಲ್ಲ ಹಾಗೂ ಗಾಯತ್ರಿಗೆ ವಿವಾಹವಾಗಿತ್ತು.
ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮದುವೆಯಾಗಿ ಕೇವಲ 24 ದಿನಗಳಲ್ಲಿ ನವ ಜೋಡಿ ಬಾರದ ಲೋಕಕ್ಕೆ ಪಯಣಿಸಿದೆ. ನವಜೋಡಿಯನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಲ್ಲಿ ಮುಳುಗಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ