ವಿಜಯೇಂದ್ರ ನೇಮಕದಿಂದ ಇಡಿ ರಾಜ್ಯದ ಯುವಕರಲ್ಲಿ ಹೊಸ ಸಂಚಲನ
ಇವತ್ತು ದೇವೇಗೌಡರನ್ನ ಭೇಟಿ ಮಾಡಿ ಸಲಹೆ ಪಡೆದುಕೊಂಡ ವಿಜಯೇಂದ್ರ
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುತ್ತೇವೆ
ಬೆಂಗಳೂರು: ದೀಪಾವಳಿ ಹಬ್ಬದ ಮುನ್ನ ದಿನವೇ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ BY ವಿಜಯೇಂದ್ರ ಅವರು ಆಯ್ಕೆ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಅದರಂತೆ ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ವಿಜಯೇಂದ್ರ ಭೇಟಿ ಮಾಡಿದ್ದಾರೆ. ಈ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ಯಾವುದೇ ಎಲೆಕ್ಷನ್ನಲ್ಲಿ ನಾವೆಲ್ಲರೂ ಒಟ್ಟಾಗಿ ಎದುರಿಸುತ್ತೇವೆ ಎಂದು ಪ್ರಮಾಣ ಮಾಡಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅಣ್ಣನ ಜೊತೆ ಸೇರಿ ದೊಡ್ಡ ಮಟ್ಟದ ಹೋರಾಟಗಳನ್ನು ಮಾಡುತ್ತೇವೆ. ಇದರಿಂದ ಎಲೆಕ್ಷನ್ನಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಅನುಕೂಲವಾಗುತ್ತದೆ. ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿ ಮಾಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 22 ರಿಂದ 24 ಸ್ಥಾನಗಳಷ್ಟು ಗೆಲ್ಲುತ್ತೇವೆ ಎಂದು ಸಂಸರ ರೇವಣ್ಣ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಣ್ಣನ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿದೆ. ಇದರಿಂದ ಎಲ್ಲ ಯುವಕರಲ್ಲಿ ಸಂಚಲನ ಮೂಡಿದೆ. 2024 ಎಲೆಕ್ಷನ್ಗೆ ಒಬ್ಬ ಡೈನಾಮಿಕ್ ಲೀಡರ್ ಬೇಕು ಎನ್ನುವ ಭಾವನೆಯಿತ್ತು. ಅದರಂತೆ ವಿಜಯೇಂದ್ರ ಅವರು ನೇಮಕವು ಆ ಭಾವನೆಯನ್ನು ಹೋಗಲಾಡಿಸಿದೆ. ಹೀಗಾಗಿ ಇಂದು ಅವರು ದೇವೇಗೌಡರನ್ನು ಭೇಟಿ ಮಾಡಿ ಸಣ್ಣಪುಟ್ಟ ಸಲಹೆಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ