Advertisment

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್.. ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಸಿಟಿ ರವಿ..?

author-image
Ganesh
Updated On
ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ; CT ರವಿ ವಿರುದ್ಧ FIR​​; ಸದ್ಯದಲ್ಲೇ ಬಂಧನ ಸಾಧ್ಯತೆ
Advertisment
  • ಸಿಟಿ ರವಿ ಅಭಿಮಾನಿಗಳಿಗೆ ಬೇಸರದ ಸುದ್ದಿ
  • ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ರವಿ
  • ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ

ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮೇಜರ್​ ಸರ್ಜರಿ ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ತಮ್ಮ ತಂಡವನ್ನು ಪುನರ್​ ರಚಿಸಿ, ಹೊಸ ತಂಡವನ್ನು ಕಟ್ಟುತ್ತಿದ್ದಾರೆ.

Advertisment

ಅಂತೆಯೇ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಯಾಗಿದ್ದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಜೊತೆಗೆ ಬಿಎಲ್ ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಕೆ ಮಾಡಲಾಗಿದೆ. ಇನ್ನು ಸಿಟಿ ರವಿ ಅವರನ್ನು ಕಳಗಿಳಿಸಿದ ಬೆನ್ನಲ್ಲೇ ಹೈಕಮಾಂಡ್​ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ. ಮತ್ತು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:ಸಿ.ಟಿ ರವಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್..!

ಕೆಲವು ವರದಿಗಳ ಪ್ರಕಾರ ಸಿಟಿ ರವಿ ಅವರು, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್​ನಲ್ಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನದ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಾರು ಆಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ಸಿಟಿ ರವಿ ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನಲಾಗಿದೆ. ಹೀಗಾಗಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಕಳಗೆ ಇಳಿಸಿ, ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಾ ಅನ್ನೋ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment