Advertisment

BREAKING: ಸಿ.ಟಿ ರವಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್..!

author-image
Bheemappa
Updated On
ವಿಧಾನಪರಿಷತ್ ಚುನಾವಣೆ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಬಿಗ್‌ ಶಾಕ್‌; ಆಗಿದ್ದೇನು?
Advertisment
  • ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್​ನಲ್ಲಿ ಸಿ.ಟಿ.ರವಿ ಇದ್ದಾರಾ?
  • ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ ಕೊಕ್‌
  • ಬಿಜೆಪಿಯ ರಾಷ್ಟ್ರೀಯ ಹೊಸ ಪದಾಧಿಕಾರಿಗಳ ಪಟ್ಟಿ ರಿಲೀಸ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಯವರಿಗೆ ಕೊಕ್‌ ನೀಡಲಾಗಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್​ನಲ್ಲಿ ಸಿ.ಟಿ.ರವಿಯವರು ಮುಂಚೂಣಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

Advertisment

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಯ ರಾಷ್ಟ್ರೀಯ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಸಿ.ಟಿ.ರವಿಯವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ. ತಮ್ಮ ತಂಡವನ್ನು ಪುನರ್​ ರಚಿಸಿರುವ ಜೆ.ಪಿ.ನಡ್ಡಾರವರು 38 ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ. ಪಟ್ಟಿಯಲ್ಲಿ ವಸುಂಧರಾ, ರಮಣ್ ಸಿಂಗ್​​, ಸಂಜಯ್ ಬಂಡಿ, ಕೈಲಾಸ್ ವಿಜಯ ವರ್ಗೀಯ ಸೇರಿ ಇನ್ನು ಕೆಲವರು ಇದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಮುಂದುವರಿಯಲಿದ್ದಾರೆ.

ಸಿ.ಟಿ ರವಿಯವರಿಗೆ ಒಂದೇ ಒಂದು ಸೋಲು ಈ ಹುದ್ದೆಯಿಂದ ತೆಗೆದು ಹಾಕಲು ಮುಳುವಾಯಿತಾ ಎನ್ನುವ ಪ್ರಶ್ನೆ ಕಾಡುತ್ತಿದೆ. ಇನ್ನು ಸಿಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು ಇಲ್ಲವೇ 2024ರ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರಿನಿಂದ ಸ್ಪರ್ಧೆ ಮಾಡುವಂತೆ ಕೇಂದ್ರ ಸೂಚಿಸಲುಬಹುದು ಎಂದು ಹೇಳಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment