/newsfirstlive-kannada/media/post_attachments/wp-content/uploads/2023/07/Venugopal-nayak.jpg)
ಮೈಸೂರು: ನಿನ್ನೆ ತಿರುವನಂತ ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ನಡೆದಿದೆ. ಆದರೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಮೇಲೆ ಪ್ರಕರಣ ದಾಖಲಾಗಿದೆ.
ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ. ಈತ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯ ನಿವಾಸಿಯಾಗಿದ್ದು, ಹನುಮ ಜಯಂತಿ ವೇಳೆ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾಗಿದ್ದಾನೆ.
ಮಾತಿನ ಚಕಮಕಿ
ಹನುಮ ಜಯಂತಿ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಹೀಗಾಗಿ ವೇಳೆ ಘರ್ಷಣೆ ಉಂಟಾಗಿತ್ತು. ಈ ಘರ್ಷಣೆಯಿಂದ ವೇಣುಗೋಪಾಲ್ ನಾಯಕ್ ಕೊಲೆಯಾಗಿದ್ದಾನೆ.
ಆರೋಪಿಗಳ ಪತ್ತೆ ಬಲೆ ಬಿಸಿದ ಪೊಲೀಸರು
ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಯ ಹಿನ್ನಲೆ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲಿನ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ