"ಕೋಚಿಂಗ್​ ಗುರು" ಫೆಬ್ರವರಿ 1 ಮತ್ತು 2 ರಂದು ನ್ಯೂಸ್​ಫಸ್ಟ್​​ನಿಂದ ಮೆಗಾ ಕೋಚಿಂಗ್​ ಎಕ್ಸ್​ಪೋ

author-image
Ganesh Nachikethu
Updated On
Advertisment
  • ನ್ಯೂಸ್​ಫಸ್ಟ್​ ರಾಜ್ಯದ ಅತ್ಯಂತ ಜನಪ್ರಿಯ ಸುದ್ದಿವಾಹಿನಿ!
  • ಅಗತ್ಯ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಿದೆ
  • ಫೆ. 1 ಮತ್ತು 2ಕ್ಕೆ ನ್ಯೂಸ್​ಫಸ್ಟ್​​ನಿಂದ ಮೆಗಾ ಕೋಚಿಂಗ್​ ಎಕ್ಸ್​ಪೋ

ಬೆಂಗಳೂರು: ನ್ಯೂಸ್​ಫಸ್ಟ್​ ರಾಜ್ಯದ ಅತ್ಯಂತ ಜನಪ್ರಿಯ ಸುದ್ದಿವಾಹಿನಿಯಾಗಿದ್ದು, ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಸೈಬರ್​ ಕ್ರೈಂ ಸೇರಿದಂತೆ ನಾಡಿನ ಜನರಿಗೆ ಅಗತ್ಯವಿರುವ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಿಕೊಂಡು ಬಂದಿದೆ. ಜೊತೆಗೆ ಮೇಲೆ ತಿಳಿಸಿರುವ ಕ್ಷೇತ್ರಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ನ್ಯೂಸ್​ಫಸ್ಟ್ ಕಳೆದ ನಾಲ್ಕು ವರ್ಷಗಳಿಂದಲೂ ನಿರಂತರವಾಗಿ ಮಾಡುತ್ತಲೇ ಇದೆ.

ಸದ್ಯ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದವಾಗುತ್ತಿರುವ ವಿದ್ಯಾರ್ಥಿಗಳಿಗೆಂದೇ ವಿನೂತನ ಎಕ್ಸ್​ಪೋ ಒಂದನ್ನ ಆಯೋಜಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದವಾಗುವ ವಿದ್ಯಾರ್ಥಿಗಳು ಏನೆಲ್ಲಾ ಕ್ರಮಗಳನ್ನು ಅನುಸರಿಸಬೇಕು, ಯಾವ ಕೋಚಿಂಗ್​ ಸೆಂಟರ್​ ಆಯ್ಕೆ ಮಾಡಿಕೊಳ್ಳಬೇಕು, ಅವರಿಂದ ಯಾವ ರೀತಿಯ ಮಾರ್ಗದರ್ಶನ ಪಡೆಯಬೇಕು ಎನ್ನುವ ಬಗ್ಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಮೆಗಾ ಎಕ್ಸ್​ಪೋ ಒಂದನ್ನ ಆಯೋಜಿಸಿದೆ. ಈ  ಎಕ್ಸ್​ಪೋನಲ್ಲಿ NEET, CET, JEE, KPSC, UPSC, CLAT, CAT, CA, PSI, PDO, ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಮಾರ್ಗದರ್ಶನ ಮಾಡುತ್ತಿರುವ ಎಲ್ಲಾ ಕೋಚಿಂಗ್​ ಸೆಂಟರ್​​ಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿವೆ.

ಇದರ ಜೊತೆಗೆ ವಿದ್ಯಾರ್ಥಿಗಳು ಓದಿರುವುದನ್ನು ಸುಲಭವಾಗಿ ನೆನಪಿನಲ್ಲಿ ಇಟ್ಟುಕೊಳ್ಳುವುದು ಹೇಗೆ? ಪರೀಕ್ಷೆ ಸಮಯದಲ್ಲಿ ಎದುರಾಗುವ ಮಾನಸಿಕ ಒತ್ತಡದಿಂದ ಆಚೆ ಬರುವುದು ಹೇಗೆ? ಅಲ್ಲದೇ ಪರೀಕ್ಷೆಯ ನಂತರ ಸೀಟ್​ ಆಯ್ಕೆ ಮಾಡಿಕೊಳ್ಳುವ ಸರಿಯಾದ ಕ್ರಮ ಯಾವುದು ಎಂಬುದರ ಬಗ್ಗೆ ಆಯಾ ವಿಷಯದಲ್ಲಿ ಪರಿಣಿತಿ ಹೊಂದಿರುವ ತಜ್ಞರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದಾರೆ.

ಅದೇ ರೀತಿ ಯುಪಿಎಸ್​ಸಿ ಮತ್ತು ಕೆಪಿಎಸ್​​ಸಿ ಯಂತಹ ನಾಗರೀಕ ಸೇವೆಗಳಿಗೆ ಸಿದ್ದಿವಾಗುವಾಗ ಸಬ್ಜೆಕ್ಟ್​​ಗಳನ್ನ ಹೇಗೆ ಆಯ್ಕೆ ಮಾಡಿಕೊಳ್ಳಬೇಕು, ಈ ಪರೀಕ್ಷೆಗಳನ್ನು ಎದುರಿಸುವಾಗ ಎದುರಾಗುವ ಸಮಸ್ಯೆಗಳೇನು? ಅದಕ್ಕೆ ಪರಿಹಾರವೇನು ಎಂಬುದನ್ನೂ ಸಹ ತಜ್ಞರು ತಿಳಿಸಿಕೊಡಲಿದ್ದಾರೆ. ಜೊತೆಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂದರ್ಶನಗಳನ್ನ ಹೇಗೆ ಎದುರಿಸಬೇಕು ಎಂಬುದರ ಬಗ್ಗೆಯೂ ಮಾರ್ಗದರ್ಶನ ಮಾಡಲಿದ್ದಾರೆ.

ವಿಶೇಷ ಎಂಬಂತೆ ನಮ್ಮ ಎಕ್ಸ್​ಪೋನಲ್ಲಿ ಭಾಗವಹಿಸಿ ಕೋಚಿಂಗ್​ ಸೆಂಟರ್​​ಗಳಲ್ಲಿ ನೊಂದಣಿ ಮಾಡಿಕೊಳ್ಳವ ಆಯ್ದ ಕೆಲವು ವಿದ್ಯಾರ್ಥಿಗಳಿಗೆ ನ್ಯೂಸ್​ಫಸ್ಟ್​ ಸ್ಕಾಲರ್​ಶಿಪ್​ ಸಹ ನೀಡಲು ಉದ್ದೇಶಿಸಿದೆ.

ಕೋಚಿಂಗ್​ ಗುರು ಹೆಸರಿನಲ್ಲಿ ನಡೆಯುತ್ತಿರುವ ಈ ಮೆಗಾ ಎಕ್ಸ್​ಪೋ ಫೆಬ್ರವರಿ 1 ಮತ್ತು 2 ರಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಜ್ಞಾನಜ್ಯೋತಿ ಆವರಣ, ಪ್ಯಾಲೇಸ್​ ರಸ್ತೆ, ಮೈಸೂರು ಬ್ಯಾಂಕ್​ ಸಮೀಪ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಅತಿ ಹೆಚ್ಚಿನ ಲಾಭವಾಗುವ ಕಾರಣ. ಶಾಲಾ/ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಎಕ್ಸ್​ಪೋನಲ್ಲಿ ಭಾಗವಹಿಸಿ ಅದರ ಲಾಭ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ:ಟೀಮ್​ ಇಂಡಿಯಾ, ಇಂಗ್ಲೆಂಡ್​ ಮಧ್ಯೆ 2ನೇ ಟಿ20; ಸ್ಟಾರ್​ ಆಟಗಾರನಿಗೆ ಕೊಕ್​

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment