/newsfirstlive-kannada/media/post_attachments/wp-content/uploads/2024/10/BNG-RAIN-RAIN.jpg)
ಬೆಂಗಳೂರು: ಇಷ್ಟು ದಿನ ಶಾಂತವಾಗಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಸಜ್ಜಾಗುತ್ತಿದ್ದಾನೆ. ಇದೀಗ ಮತ್ತೆ ರಾಜ್ಯಕ್ಕೆ ಮಳೆ ಭೀತಿ ಎದುರಾಗಿದೆ. ಮುಂದಿನ ಎರಡು ವಾರಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇದನ್ನೂ ಓದಿ: ಅಬ್ಬಾ.. ಸಿಕ್ಕಾಪಟ್ಟೆ ವೈರಲ್ ಆದ ನೀತಾ ಅಂಬಾನಿ ಪಾಪ್ಕಾರ್ನ್ ಬ್ಯಾಗ್! ಇದರ ಬೆಲೆ ಎಷ್ಟು ಗೊತ್ತಾ?
ರಾಜ್ಯ ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ಡಿಸೆಂಬರ್ 03ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೆಲವೊಂದು ಕಡೆಗಳಲ್ಲಿ ತುಂತುರು ಮಳೆ ಸುರಿದಿದ್ದು, ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಮಳೆ ಸುರಿಯುವ ಮುನ್ಸೂಚನೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ