newsfirstkannada.com

ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ವರುಣಾರ್ಭಟ.. ಗುಡುಗು, ಮಿಂಚು ಸಮೇತ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Share :

Published June 6, 2024 at 11:17am

    ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗಿದೆ

    ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಆಗುತ್ತೆಂದು ಇಲಾಖೆ ಮಾಹಿತಿ ನೀಡಿದೆ?

    ಗುಡುಗು, ಮಿಂಚು ಸಮೇತ ಧಾರಾಕಾರವಾಗಿ ಮಳೆ ಸುರಿಯಲಿದೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಮೇತ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಬಂದಿದ್ದರಿಂದ ಕೆಲ ಜಲಾಶಯಗಳಿಗೆ ನೀರು ಹರಿದು ಬಂದಿದೆ. ಇದರಿಂದ ಕರ್ನಾಟಕದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸೂಚನೆ ಇದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಸ್ನೇಹಿತನ ಬರ್ತ್ ​​​ಡೇ ಪಾರ್ಟಿಯಲ್ಲಿ ಹರಿಯಿತು ನೆತ್ತರು; ಗೆಳೆಯರಿಂದಲೇ ಯುವಕನ ಬರ್ಬರ ಹತ್ಯೆ; ಕಾರಣವೇನು?

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಲೆನಾಡು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು & ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ವರುಣಾರ್ಭಟ.. ಗುಡುಗು, ಮಿಂಚು ಸಮೇತ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

https://newsfirstlive.com/wp-content/uploads/2024/05/RAIN-15.jpg

Load More