newsfirstkannada.com

Rain Alert: ಉದ್ಯಾನ ನಗರಿಯಲ್ಲಿ ಮುಂದಿನ 3 ದಿನ ಸಾಧಾರಣ ಮಳೆ.. ರಾಜ್ಯದಲ್ಲಿ ಎಲ್ಲೆಲ್ಲಿ?

Share :

Published May 4, 2024 at 2:45pm

    ಎಲ್ಲೆಲ್ಲಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ?

    ಈಗಾಗಲೇ 2 ದಿನ ಸಣ್ಣ ಮಳೆ ಆಗಿದ್ದಕ್ಕೆ ನಗರದ ವಾಸಿಗಳು ಖುಷಿ

    ಈ ದಿನದ ಬಳಿಕ ಬೆಂಗಳೂರಿನಲ್ಲಿ ಮಳೆ ಹೆಚ್ಚಾಗೋ ಸಾಧ್ಯತೆ

ಬೆಂಗಳೂರು: ಉದ್ಯಾನ ನಗರಿಯಲ್ಲಿ ಮುಂದಿನ 3 ದಿನಗಳ ಕಾಲ ಸಾಧಾರಣವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಟ್ಟದಲ್ಲಿ ಮಳೆ ಆಗುವ ಸಂಭವ ಇದೆ. ಅದರಂತೆ ಮೇ 7 ಮತ್ತು 8ರ ನಂತರ ಸಿಲಿಕಾನ್ ಸಿಟಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳಲ್ಲಿ ಉಷ್ಣಾಂಶ ಗರಿಷ್ಠ 38 ಡಿಗ್ರಿ ಇರಲಿದ್ದು, ಕನಿಷ್ಠ 24 ಡಿಗ್ರಿ ತಾಪಮಾನ ಮುಂದುವರಿಯುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಯಶ್​ ಟಾಕ್ಸಿಕ್​​ನಿಂದ ಬಾಲಿವುಡ್​ ಬ್ಯೂಟಿ ಔಟ್​.. ಕರೀನಾ ಹೊರ ಬರಲು ಕಾರಣ?

ಇದನ್ನೂ ಓದಿ: ಹೃದಯ ವಿದ್ರಾವಕ ಘಟನೆ.. ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿ ನೀರಿನಲ್ಲಿ ಮುಳುಗಿ ಸಾವು

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರವಾಗಿ ಮಳೆ ಸುರಿಯುವ ಸಂಭವ ದಟ್ಟವಾಗಿದೆ. ಮೇ 7ರ ಬಳಿಕ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain Alert: ಉದ್ಯಾನ ನಗರಿಯಲ್ಲಿ ಮುಂದಿನ 3 ದಿನ ಸಾಧಾರಣ ಮಳೆ.. ರಾಜ್ಯದಲ್ಲಿ ಎಲ್ಲೆಲ್ಲಿ?

https://newsfirstlive.com/wp-content/uploads/2024/05/rain22.jpg

Load More