ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣದ ತನಿಖೆ NIA ಹೆಗಲಿಗೆ; ಕೇಂದ್ರ ಗೃಹ‌ ಇಲಾಖೆ ಮಹತ್ವದ ಆದೇಶ

author-image
admin
Updated On
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣದ ತನಿಖೆ NIA ಹೆಗಲಿಗೆ; ಕೇಂದ್ರ ಗೃಹ‌ ಇಲಾಖೆ ಮಹತ್ವದ ಆದೇಶ
Advertisment
  • ಮೇ 1ರಂದು ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಘಟನೆ
  • ಈ ಪ್ರಕರಣವನ್ನು NIAಗೆ‌ ನೀಡುವಂತೆ ಹಿಂದೂ ಸಂಘಟನೆ ಆಗ್ರಹ
  • ಈವರೆಗೆ 11 ಜನರನ್ನು ಬಂಧಿಸಿರುವ ಮಂಗಳೂರು ಪೊಲೀಸರು

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ NIAಗೆ ವಹಿಸಿದೆ.

ಕಳೆದ ಮೇ 1ರಂದು ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಈವರೆಗೆ 11 ಜನರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

publive-image

ಸುಹಾಸ್ ಶೆಟ್ಟಿ ಪೋಷಕರು, ಹಿಂದೂ ಸಂಘಟನೆಗಳು ಈ ಪ್ರಕರಣವನ್ನು NIAಗೆ‌ ನೀಡುವಂತೆ ಒತ್ತಾಯಿಸಿದ್ದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತನಿಖೆಯನ್ನು NIAಗೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಮುಗಿಸಲು ಪಕ್ಕಾ ಪ್ಲಾನ್.. 2 ಬಾರಿ ಟಾರ್ಗೆಟ್ ಮಿಸ್; ಮೂರನೇ ಬಾರಿ ಫಿನಿಶ್! 

publive-image

ಒತ್ತಾಯಕ್ಕೆ ಮಣಿದಿರುವ ಕೇಂದ್ರ ಗೃಹ ಇಲಾಖೆ ಸುಹಾಸ್ ಶೆಟ್ಟಿ ಪ್ರಕರಣವನ್ನು NIAಗೆ ವಹಿಸಿದೆ. ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿ ಅವರು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

publive-image

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕರಾವಳಿ ಜನತೆಯ ಮನವಿಗೆ ಸ್ಪಂದಿಸಿ ನಮ್ಮ ಕೇಂದ್ರ ಸರ್ಕಾರ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ.

ಕರಾವಳಿಯಲ್ಲಿ ಹಿಂದೂ ಸಮುದಾಯ ಆತಂಕ ಪಡುವ ಪರಿಸ್ಥಿತಿ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಭೀಕರವಾಗಿ ನಡು ರಸ್ತೆಯಲ್ಲಿ ಸುಹಾಸ್ ಕೊಲೆ ನಡೆದಿದೆ, ಈ ಪ್ರಕರಣದ ತನಿಖೆಯ ಹಾದಿ ಕಾಂಗ್ರೆಸ್ ಸರ್ಕಾರದ ಆಡಳಿತದ ನೆರಳಿನಲ್ಲಿ ದಿಕ್ಕು ತಪ್ಪುತ್ತಿದ್ದ ಪರಿ ಹಾಗೂ ನ್ಯಾಯದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರ ನಿರೀಕ್ಷೆ ಕುಸಿಯುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎನ್ಐಎ ಗೆ ವಹಿಸಿರುವ ಕ್ರಮ ಕೊಲೆಗಡುಕರಿಗೆ ಶಿಕ್ಷೆಯಾಗುವ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ಷಡ್ಯಂತರ ಬಯಲು ಮಾಡುವ ಭರವಸೆ ಹುಟ್ಟಿಸಿದೆ.

ಕೋಮು ನಿಗ್ರಹ ದಳದ ಮೂಲಕ ಹಿಂದೂ ಕಾರ್ಯಕರ್ತರನ್ನಷ್ಟೇ ಟಾರ್ಗೆಟ್ ಮಾಡಿ ಕರಾವಳಿ ಪ್ರದೇಶದಲ್ಲಿ ಹಿಂದೂ ಸಮಾಜದ ಯುವಕರ ಭವಿಷ್ಯವನ್ನು ಮುಸುಕಾಗಿಸುವ ಮುಸ್ಲಿಂ ಓಲೈಕೆಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆಯನ್ನು ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಬಳಸಿಕೊಳ್ಳುತ್ತಿದ್ದು ಈ ಸಂಬಂಧ ಬಿಜೆಪಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment