/newsfirstlive-kannada/media/post_attachments/wp-content/uploads/2024/11/NIKHIL_CPY.jpg)
ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು ಈ ಪೈಕಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು​ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 23,210 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್​ಸ್ವಾಮಿ ಅವರು ಹಿನ್ನಡೆ ಅನುಭವಿಸಿದ್ದಾರೆ. 2024ರ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಸಾಕಷ್ಟು ಸದ್ದು ಮಾಡಿತ್ತು. ಹೀಗಾಗಿ ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂದು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. 3-4 ಸುತ್ತಿನಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಆದರೆ 11ನೇ ಸುತ್ತಿಗೆ ಬರುವಷ್ಟರಲ್ಲಿ ಕಾಂಗ್ರೆಸ್​ ಮುನ್ನಡೆಯಲ್ಲಿದೆ.
11ನೇ ಸುತ್ತಿನಲ್ಲಿ ನಿಖಿಲ್ ಮುನ್ನಡೆ!
- NDA ನಿಖಿಲ್ ಕುಮಾರಸ್ವಾಮಿ 46,001 ಮತಗಳು ಹಿನ್ನಡೆ
- ಕಾಂಗ್ರೆಸ್ ಸಿ.ಪಿ. ಯೋಗೇಶ್ವರ್ 67,967 ಮತಗಳು– ಮುನ್ನಡೆ
- ಸಿ.ಪಿ. ಯೋಗೇಶ್ವರ್ 21,966 ಮತಗಳ ಮುನ್ನಡೆಯಲ್ಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us