/newsfirstlive-kannada/media/post_attachments/wp-content/uploads/2024/11/NIKHI-KUMARSWAMY.jpg)
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿಗೆ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ವಿರುದ್ಧ ಸೋಲಾಗಿದೆ.
ಚುನಾವಣಾ ಫಲಿತಾಂಶ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ.. ಎರಡು ಪಕ್ಷಗಳ ಅಭಿಪ್ರಾಯ ಸಂಗ್ರಹಿಸಿದ ನಂತರ ನನಗೆ NDA ಅಭ್ಯರ್ಥಿಯಾಗಿ ನಿಲ್ಲುವ ಅವಕಾಶ ಸಿಕ್ಕಿತ್ತು. ಇವತ್ತಿನ ಫಲಿತಾಂಶ ನಮ್ಮ ಕಾರ್ಯಕರ್ತರಿಗೂ, ಬಿಜೆಪಿ ಕಾರ್ಯಕರ್ತರಿಗೂ ಸಾಮಾನ್ಯವಾಗಿ ಆಘಾತ ತಂದುಕೊಟ್ಟಿದೆ. ಪ್ರತಿ ಹಳ್ಳಿಯಲ್ಲೂ ಯುವಕರು, ತಾಯಂದಿರು ಪ್ರೀತಿ ವಾತ್ಸಲ್ಯ ತೋರಿದ್ದಾರೆ. 87 ಸಾವಿರ ಮತಗಳು ನನ್ನ ಪರವಾಗಿ ಬಂದಿದೆ. ಮತದಾರರ ತೀರ್ಪಿಗೆ ನಾವು ತಲೆ ಬಾಗುತ್ತೇವೆ ಎಂದರು.
ಇದನ್ನೂ ಓದಿ:ಚನ್ನಪಟ್ಟಣದಲ್ಲಿ ಯೋಗೇಶ್ವರ್ಗೆ ಗೆಲುವು.. ಜಮೀರ್ ಹೇಳಿಕೆಯ ಚರ್ಚೆ ಹಿಂದಿನ ಸತ್ಯ ಬಿಚ್ಚಿಟ್ಟ ಡಿಕೆ ಸುರೇಶ್..!
ಎರಡು ಪಕ್ಷದ ನಾಯಕರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಇದು ಬಯಸದೇ ಬಂದ ಉಪಚುನಾವಣೆ. ಕಡೆ ಹಂತದಲ್ಲಿ ತೆಗೆದುಕೊಂಡಿರುವ ನಿರ್ಧಾರಕ್ಕೆ ತಲೆಬಾಗುವ ಸ್ಥಿತಿ ಇದು. ರಾಮನಗರ ಜನತೆ ದೇವೆಗೌಡರು, ಕುಮಾರಣ್ಣನನ್ನು ಎತ್ತರಕ್ಕೆ ಬೆಳೆಸಿದವರು. ನಾನು ಚುನಾವಣೆ ವೇಳೆ ಮಾತಾಡಿದ ಮಾತು ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗಿರಲ್ಲ.
ನಾನು ಕೊಟ್ಟಿರುವ ಯಾವುದೇ ಮಾತು ಹಿಂಪಡೆಯೋದಿಲ್ಲ. ನಾನು ಮಾತಾಡಿರೋ ಮಾತು ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ನಾನು ಈ ಜಿಲ್ಲೆಯ ಮಗ ಎಂದು ಭಾವಿಸ್ತೀನಿ. ನಾವು ಇಲ್ಲಿ ಜನಿಸಿಲ್ಲವಾದರೂ ನಮ್ಮ ಸಂಪರ್ಕ ಅತ್ಯಂತ ಭಾವನಾತ್ಮಕವಾಗಿದೆ. ರಾಮನಗರ ಜಿಲ್ಲೆಯ ಜನರ ಜೊತೆ ಪ್ರಾಮಾಣಿಕವಾಗಿ ಹೆಜ್ಜೆ ಹಾಕುತ್ತೇನೆ. ಕುಮಾರಣ್ಣನ ಜೊತೆಗೂಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಾನು ಎದೆಗುಂದುವ ಪ್ರಶ್ನೆಯೇ ಬರುವುದಿಲ್ಲ. ಯಾವುದೇ ಭಾವನೆ ಹೊರಹಾಕಲು ಹೋಗುವುದಿಲ್ಲ. ಕಾರ್ಯಕರ್ತರೇ ನಮ್ಮ ಪಕ್ಷದ ಬೆನ್ನೆಲುವು. ದೇವೆಗೌಡರು ಫೀನಿಕ್ಸ್ನಂತೆ ಜೆಡಿಸ್ ಕಟ್ಟಿದ್ದಾರೆ. ಎಲ್ಲ ಏಳು ಬೀಳುಗಳನ್ನು ನೋಡಿದ್ದೇವೆ, ಎಲ್ಲವನ್ನು ಸಮಚಿತ್ತವಾಗಿ ಕೊಂಡೊಯ್ತೀವಿ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ