ವಿದೇಶದಲ್ಲಿ ನಿಖಿಲ್ ಫುಲ್ ಜಾಲಿ ಮೂಡ್
ಅದ್ಭುತ ಕ್ಷಣಗಳ ಫೋಟೋ ಹಂಚಿಕೊಂಡ ನಿಖಿಲ್
ಪತ್ನಿಯ ಕೈಹಿಡಿದು ನಡೆದ ವಿಡಿಯೋ ವೈರಲ್
ಕುಟುಂಬದ ಜೊತೆ ವಿದೇಶಿ ಪ್ರವಾಸದಲ್ಲಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹೆಂಡತಿ ಮತ್ತು ಮಗು ಜೊತೆಗಿನ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳಿಗೆ ಮತ್ತು ಬೆಂಬಲಿಗರಿಗೆ ಹೊಸ, ಹೊಸ ಅಪ್ಡೇಟ್ ಕೊಡುತ್ತಿದ್ದಾರೆ.
ಐಲ್ಯಾಂಡ್ನಲ್ಲಿ ಕುಟುಂಬದ ಜೊತೆ ಸಮಯ ಕಳೆಯುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಜುಲೈ 21 ರಂದು ಈ ಫೋಟೋ ಹಂಚಿಕೊಂಡಿದ್ದು, ಅಂದು ತಮ್ಮ ಪತ್ನಿ ರೇವತಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಇನ್ನು ನಿನ್ನೆ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದಾರೆ. ವಿದೇಶದ ರಸ್ತೆ ಮೇಲೆ ಹೆಂಡತಿ ಕೈ ಹಿಡಿದು ನಿಖಿಲ್ ವಾಕಿಂಗ್ ಮಾಡ್ತಿರೋ ವಿಡಿಯೋವನ್ನ ತನ್ನ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಅವರ ಇಡೀ ಫ್ಯಾಮಿಲಿ ವಿದೇಶಿ ಪ್ರವಾಸ ಕೈಗೊಂಡಿದೆ. ಕುಮಾರಸ್ವಾಮಿ ವಿದೇಶಿ ಪ್ರವಾಸ ಬೆನ್ನಲ್ಲೇ ರಾಜ್ಯರಾಜಕಾರಣದಲ್ಲಿ ಭಾರೀ ಸುದ್ದಿಯಾಗಿತ್ತು. ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಿಂದ ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಕುಮಾರಸ್ವಾಮಿ ಕುಟುಂಬದ ವಿದೇಶಿ ಪ್ರವಾಸದ ಫೋಟೋಗಳು ವೈರಲ್ ಆಗಿದ್ದವು. ಸಿಂಗಾಪುರ ಬದಲಾಗಿ ಯುರೋಪ್ ದೇಶಗಳಲ್ಲಿ ಟ್ರಿಪ್ ಮಾಡುತ್ತಿರುವ ಫೋಟೋಗಳನ್ನು ವೈರಲ್ ಮಾಡಲಾಗಿತ್ತು.
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ