newsfirstkannada.com

ಮಂಡ್ಯದಲ್ಲಿ ಸ್ಪರ್ಧೆಗೆ ಈಗಲೂ ಡಿಮ್ಯಾಂಡ್ ಇದೆ; ಸುಮಲತಾ ಅಂಬರೀಶ್‌ಗೆ ಚೆಕ್‌ ಇಟ್ಟ ನಿಖಿಲ್ ಕುಮಾರಸ್ವಾಮಿ

Share :

Published February 11, 2024 at 2:16pm

    ‘ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ‘- ನಿಖಿಲ್ ಕುಮಾರಸ್ವಾಮಿ

    ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ

    ಮಂಡ್ಯದಲ್ಲಿ ಸುಮಲತಾ ಅವರ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯೂ ಮಂಡ್ಯ ರಾಜಕೀಯ ರಂಗೇರುತ್ತಿದೆ. ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ ಅವರ ಬಳಿಯೇ ಟಿಕೆಟ್‌ ಕೇಳಿದ ಮೇಲೆ ಜೆಡಿಎಸ್ ನಾಯಕರು ಅಲರ್ಟ್‌ ಆಗಿದ್ದಾರೆ. ಅದರಲ್ಲೂ ಕಳೆದ ಬಾರಿ ಸುಮಲತಾ ಅವರ ವಿರುದ್ಧವೇ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮತ್ತೆ ಅಖಾಡಕ್ಕಿಳಿಸೋ ಒತ್ತಾಯ ಕೇಳಿ ಬಂದಿದೆ.

ಮಂಡ್ಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಅವರು ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಹೇಳಿದ್ದೆ. ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ. 2019ರಲ್ಲಿ ಜೆಡಿಎಸ್‌ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ. ಇದಕ್ಕೆಲ್ಲ ಕೇಂದ್ರದ ನಾಯಕರು, ನಮ್ಮ ಪಕ್ಷದ ವರಿಷ್ಠರು ಅತಿ ಶೀಘ್ರದಲ್ಲೇ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುತ್ತಾರೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕು, ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತೆ ಎನ್ನುವ ಮಾತನಾಡಿದ್ದಾರೆ.

ಇನ್ನು ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ. ಮಂಡ್ಯಗೆ ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆದರು. ಈ ಒತ್ತಡ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಲ ಪಡಿಸಬೇಕು. ಮತ್ತೆ ಮೋದಿಯವರು ಪ್ರಧಾನಿ ಆಗಬೇಕು. ನನ್ನ ಗಮನ 28 ಕ್ಷೇತ್ರಗಳ ಕಡೆಯೂ ಇರುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಸುತ್ತೂರು ಜಾತ್ರಾಮಹೋತ್ಸವದಲ್ಲಿ ಅಮಿತ್ ಶಾ; ಆಹ್ವಾನವಿದ್ದರೂ ಕಾಣಿಸಿಕೊಳ್ಳದ ಕುಮಾರಸ್ವಾಮಿ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ, ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆಯ ಬಗ್ಗೆ ಮಹತ್ವದ ಚರ್ಚೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಮಂಡ್ಯ, ಹಾಸನದಲ್ಲೇ ಜೆಡಿಎಸ್‌ಗೆ ಟಿಕೆಟ್ ನೀಡಲು ಬಿಜೆಪಿ ನಾಯಕರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಅವರ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಪ್ರೀತಂ ಗೌಡರ ಹೇಳಿಕೆಯನ್ನು ಕೇಂದ್ರದ ನಾಯಕರು, ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯದಲ್ಲಿ ಸ್ಪರ್ಧೆಗೆ ಈಗಲೂ ಡಿಮ್ಯಾಂಡ್ ಇದೆ; ಸುಮಲತಾ ಅಂಬರೀಶ್‌ಗೆ ಚೆಕ್‌ ಇಟ್ಟ ನಿಖಿಲ್ ಕುಮಾರಸ್ವಾಮಿ

https://newsfirstlive.com/wp-content/uploads/2024/02/NIkhil-Kumarswamy-On-Mandya.jpg

Load More