Advertisment

ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್.. ಜೆಡಿಎಸ್, BJP ನಾಯಕರಿಂದ ಮಹತ್ವದ ತೀರ್ಮಾನ!

author-image
admin
Updated On
ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್.. ಜೆಡಿಎಸ್, BJP ನಾಯಕರಿಂದ ಮಹತ್ವದ ತೀರ್ಮಾನ!
Advertisment
  • ಸಿ.ಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಕಣಕ್ಕಿಳಿಸಿದ ದೇವೇಗೌಡರು
  • ಚನ್ನಪಟ್ಟಣ ಅಭ್ಯರ್ಥಿ ಘೋಷಣೆ ಸಂಬಂಧ ಸಮನ್ವಯ ಸಭೆ
  • ಬಿಎಸ್‌ವೈ, ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ನಾಯಕರ ಚರ್ಚೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಸರು ಅಂತಿಮವಾಗಿದೆ. ಅಳೆದು ತೂಗಿ ಲೆಕ್ಕ ಹಾಕಿದ ದಳಪತಿಗಳು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆ ಹಾಕಿದ್ದಾರೆ.

Advertisment

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಎದುರಾಳಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: BIG BREAKING: ಚನ್ನಪಟ್ಟಣಕ್ಕೆ JDS ಅಭ್ಯರ್ಥಿ ಫಿಕ್ಸ್.. ನಿಖಿಲ್ ಕುಮಾರಸ್ವಾಮಿ ಮಹತ್ವದ ಘೋಷಣೆ 

ಜೆ.ಪಿ ಭವನದಲ್ಲಿ ಜೆಡಿಎಸ್ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಹೆಚ್.ಡಿ ದೇವೇಗೌಡರು ಕಾರ್ಯಕರ್ತರ ಒತ್ತಡಕ್ಕೆ ಮಣೆ ಹಾಕಿದ್ದಾರೆ. ಸಭೆ ಬಳಿಕ ಮಾತನಾಡಿದ ದೇವೇಗೌಡರು, ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

Advertisment

publive-image

H.D ದೇವೇಗೌಡರು ಹೇಳಿದ್ದೇನು?
ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ. ನಾಳೆ ಚನ್ನಪಟ್ಟಣದಲ್ಲಿ ನಿಖಿಲ್‌ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ನಾನು ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡುತ್ತೀನಿ. ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಕುಮಾರಸ್ವಾಮಿ, ಯಡಿಯೂರಪ್ಪ ಅವರು ಪ್ರೆಸ್ ಮೀಟ್ ಮಾಡಿ ಮೈತ್ರಿ ಧರ್ಮದ ಪರವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತಾರೆ ಎಂದು ಹೆಚ್‌ಡಿಡಿ ಹೇಳಿದ್ದಾರೆ.

publive-image

ಇದೇ ವೇಳೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಅವರು ನಾವು ಎಲ್ಲರೂ ಫೈನಲ್ ಮಾಡಿದ್ದೇವೆ. ಕಾರ್ಯಕರ್ತರಿಗೆ ತಲೆಬಾಗಲೇಬೇಕು. ಎರಡು ಪಕ್ಷದ ಮೈತ್ರಿ ಬಲ ಉಳಿಯಬೇಕು. ಎಲ್ಲಾ ವಿಷಯ ಯಡಿಯೂರಪ್ಪ ಮನೆಯಲ್ಲಿ ಮಾತಾಡ್ತಿನಿ. ಯಡಿಯೂರಪ್ಪ, ಆರ್‌.ಅಶೋಕ್ ಫೈನಲ್ ಆಗಿ ಘೋಷಣೆ ಮಾಡ್ತಿವಿ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment