newsfirstkannada.com

‘ನನ್ನ ಜೀವನದ ಗುರಿ ಏನಂದರೆ..’ ರಾಜಕೀಯದಿಂದ ದೂರ ವಿಚಾರಕ್ಕೆ ಮೌನ ಮುರಿದ ನಿಖಿಲ್ ಕುಮಾರಸ್ವಾಮಿ

Share :

30-08-2023

  ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ -ನಿಖಿಲ್

  ನಿಖಿಲ್ ಆಯ್ಕೆ ರಾಜಕೀಯನಾ? ಸಿನಿಮಾನಾ..?

  ನಿಖಿಲ್ ಕುಮಾರಸ್ವಾಮಿ ಕೊಟ್ಟ ಉತ್ತರ ಏನು ಗೊತ್ತಾ?

ಬೆಂಗಳೂರು: ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇನ್ಮುಂದೆ ರಾಜಕೀಯದಿಂದ ದೂರ ಆಗಿ ಮತ್ತೆ ಸಿನಿಮಾ ಕಡೆ ಮುಖ ಮಾಡುತ್ತಾರೆ ಎಂಬ ವದಂತಿ ಎಲ್ಲೆಡೆ ಹಬ್ಬಿತ್ತು. ಇದೀಗ ತಮ್ಮ ಕುರಿತ ಊಹಾಪೋಹ ಸುದ್ದಿಗಳಿಗೆ ಸೋಶಿಯಲ್ ಮೀಡಿಯಾ ಮೂಲಕ ನಿಖಿಲ್ ಉತ್ತರ ನೀಡಿದ್ದಾರೆ.

ಈ ಭಾವನೆ ಯಾರಿಗೂ ಬೇಡ

ಆರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ. ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ.

‘ನನ್ನ ಜೀವನದ ಗುರಿ..’

ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ. ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ.

ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನನ್ನ ಜೀವನದ ಗುರಿ ಏನಂದರೆ..’ ರಾಜಕೀಯದಿಂದ ದೂರ ವಿಚಾರಕ್ಕೆ ಮೌನ ಮುರಿದ ನಿಖಿಲ್ ಕುಮಾರಸ್ವಾಮಿ

https://newsfirstlive.com/wp-content/uploads/2023/08/NIKHIL-1.jpg

Load More