ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

author-image
Ganesh
Updated On
ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
Advertisment
  • ಸಾವಿರಾರು ಮಕ್ಕಳು ಮತ್ತು ಹದಿಹರೆಯದವರಿಗೆ ಯೋಜನೆ
  • ಸುಮಾರು 1 ಲಕ್ಷ ಮಹಿಳೆಯರು ಈ ಸೇವೆಯನ್ನು ಪಡೆಯಲಿದ್ದಾರೆ
  • ನೀತಾ ಅಂಬಾನಿ ಮುಂದಿನ ಟಾರ್ಗೆಟ್ ಏನು ಗೊತ್ತಾ..?

ಶ್ರೀಮಂತ ಮುಕೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಿಲಯನ್ಸ್ ಫೌಂಡೇಶನ್ 10 ವರ್ಷ ಪೂರ್ಣಗೊಳಿಸಿದ ಸವಿ ನೆನಪಿಗಾಗಿ ನೀತಾ ಅಂಬಾನಿ, ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ.

ಮಕ್ಕಳು, ಹದಿಹರೆಯದವರು ಮತ್ತು ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಸರ್ HN ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ (Sir H.N. Reliance Foundation Hospital) 10 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆಯ ಭರವಸೆ ನೀಡಿದ್ದಾರೆ. ಆರೋಗ್ಯ ಸೇವಾ ಯೋಜನೆಯ ಭಾಗವಾಗಿ ಬಡ ಮಕ್ಕಳಿಗೆ ವಿಶೇಷ ವೈದ್ಯಕೀಯ ವ್ಯವಸ್ಥೆ ನೀಡಲಾಗುತ್ತದೆ.

ಇದನ್ನೂ ಓದಿ:Diwali Festival; ದೀಪಾವಳಿಗೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.. ಈ ತಪ್ಪು ಮಾಡಬೇಡಿ!

  • ಹೃದ್ರೋಗದಿಂದ ಬಳಲುತ್ತಿರುವ 50,000 ಮಕ್ಕಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ
  • 50,000 ಮಹಿಳೆಯರಿಗೆ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ನ ಉಚಿತ ತಪಾಸಣೆ ಮತ್ತು ಚಿಕಿತ್ಸೆ
  • 10,000 ಹೆಣ್ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್​ಗೆ ಉಚಿತ ಲಸಿಕೆ ಪೂರೈಕೆ

ರಿಲಯನ್ಸ್ ಫೌಂಡೇಶನ್‌ ಒಗ್ಗಟ್ಟಿನಿಂದ ಒಂದು ದಶಕ ಪೂರೈಸಿದೆ. 10 ವರ್ಷಗಳಿಂದ ದೇಶಕ್ಕೆ ಆರೋಗ್ಯಕರ, ಉಜ್ವಲ ಭವಿಷ್ಯವನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ. ಆಸ್ಪತ್ರೆಯನ್ನು ವಿಶ್ವದರ್ಜೆಯನ್ನಾಗಿ ಮಾಡುವುದು ನಮ್ಮ ಗುರಿ ಎಂದು ಕಾರ್ಯಕ್ರಮದಲ್ಲಿ ನಿತಾ ಅಂಬಾನಿ ಹೇಳಿದ್ದಾರೆ.

ಇದನ್ನೂ ಓದಿ:ONGC; ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.. SSLC, PUC, ಐಟಿಐ ಸೇರಿ ಪದವೀಧರರಿಗೂ ಅವಕಾಶ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment