/newsfirstlive-kannada/media/post_attachments/wp-content/uploads/2023/06/Chandan-Shetty-Niveditha-Gowda.jpg)
ಇಂದು ಮಧ್ಯಾಹ್ನ ಅಭಿಮಾನಿಗಳಿಗೆ ಶಾಕಿಂಗ್​ ನ್ಯೂಸ್​ವೊಂದು ಕಾದಿತ್ತು. ಬಿಗ್​ಬಾಸ್​ ಮೂಲಕ ಖ್ಯಾತಿ ಪಡೆದುಕೊಂಡಿದ್ದ ನಿವೇದಿತಾ ಗೌಡ ಹಾಗೂ ಚಂದನ್​​ ಶೆಟ್ಟಿ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕೋರ್ಟ್​ ಮೆಟ್ಟಿಲಿನಲ್ಲಿ ನಾಲ್ಕು ವರ್ಷದ ದಾಂಪತ್ಯ ಜೀವನ ಮುರಿದು ಬಿದ್ದಿದೆ. ನಾಲ್ಕು ವರ್ಷಗಳ ಹಿಂದೆ ಶುರುವಾಗಿದ್ದ ಇವರಿಬ್ಬರ ಪ್ರೀತಿ ಪಯಣ ಈಗ ಮುರಿದು ಬಿದ್ದಿದೆ.
/newsfirstlive-kannada/media/post_attachments/wp-content/uploads/2024/06/Chandan-Shetty-Nivedita-Gowda-2.jpg)
ಇನ್ನು, ಡಿವೋರ್ಸ್ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಖುದ್ದು ಚಂದನ್ ಹಾಗೂ ನಿವೇದಿತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮೂಲಕ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿದ್ದರು. ಈ ದಿನ.. ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರು ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಚಂದನ್ ಹಾಗೂ ನಿವೇದಿತಾ ಗೌಡ ತಿಳಿಸಿದ್ದರು.
/newsfirstlive-kannada/media/post_attachments/wp-content/uploads/2024/06/nivi.jpg)
ಇದೀಗ ಈ ಪೋಸ್ಟ್​ ಶೇರ್ ಮಾಡಿ ಒಂದು ಗಂಟೆಯ ಬಳಿಕ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಚಂದನ್ ಹಾಗೂ ನಿವೇದಿತಾ ಒಬ್ಬರಿಗೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದಾರೆ. ಇಷ್ಟು ದಿನ ಜೊತೆ ಜೊತೆಯಾಗಿ ಓಡಾಡಿಕೊಂಡಿದ್ದ ದಂಪತಿ ಈಗ ನಾನೊಂದು ತೀರ ನೀನೊಂದು ತೀರ ಅಂತ ದೂರ ಆಗಿದ್ದಾರೆ. ಇನ್ನು ಇದನ್ನು ನೋಡಿದ ನೆಟ್ಟಿಗರು ಭಿನ್ನ ವಿಭಿನ್ನವಾಗಿ ಕಾಮೆಂಟ್​ ಮಾಡಿ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us