newsfirstkannada.com

ಡಿವೋರ್ಸ್‌ ಬೆನ್ನಲ್ಲೇ ಚಂದನ್​ ಶೆಟ್ಟಿ ಮಾಜಿ ಪತ್ನಿ ಪ್ರತ್ಯಕ್ಷ; ನಿವೇದಿತಾ ಗೌಡ ವಿಡಿಯೋ ವೈರಲ್!

Share :

Published June 20, 2024 at 3:37pm

Update June 20, 2024 at 10:53pm

  ಚಂದನ್​​ ಶೆಟ್ಟಿಯಿಂದ ವಿಚ್ಛೇದನ ಪಡೆದ ಬಳಿಕ ಸೈಲೆಂಟ್ ಆಗಿದ್ದ ನಿವೇದಿತಾ

  ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯ ಮೇರೆಗೆ ದೂರವಾದ ಸ್ಟಾರ್ ಜೋಡಿ

  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ನಿವೇದಿತಾ ಗೌಡ ವಿಡಿಯೋ

ಕನ್ನಡದ ಱಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕು ಅಂತ್ಯ ಕಂಡಿದೆ. ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದರು. ಡಿವೋರ್ಸ್‌ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಖುದ್ದು ಚಂದನ್, ನಿವೇದಿತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದೂರ ದೂರ ಆಗಿದ್ದಾರೆ. ಆದರೆ ಇದೀಗ ದಿಢೀರ್​ ಅಂತ ಇನ್​ಸ್ಟಾಗ್ರಾಮ್​ನಲ್ಲಿ ನಿವೇದಿತಾ ಗೌಡ ಅವರು ಪ್ರತ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ದರ್ಶನ್‌ ಗ್ಯಾಂಗ್ ವಿರುದ್ಧ 8 ಹೊಸ ಸೆಕ್ಷನ್‌ ಸೇರಿಸಿದ ಪೊಲೀಸರು.. ಯಾವ್ಯಾವ ಸೆಕ್ಷನ್‌ಗೆ ಎಷ್ಟು ವರ್ಷ ಶಿಕ್ಷೆ?

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್, ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮದ ಮೂಲಕ ನಿವೇದಿತಾ ಗೌಡ ಅವರು ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಆಗಾಗ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸದ್ದಿಯಲ್ಲಿ ಇರುತ್ತಿದ್ದರು. ಕೆಲವು ದಿನಗಳಿಂದ ಚಂದನ್ ಶೆಟ್ಟಿ ಡಿವೋರ್ಸ್‌ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಪೋಸ್ಟ್​ ಶೇರ್ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರ ಅಭಿಮಾನಿಗಳು ಏಕೆ ನಿವಿ ತುಂಬಾ ಸೈಲೆಂಟ್ ಆಗಿದ್ದೀರಿ? ಯಾವುದೇ ಪೋಸ್ಟ್​​ ಹಾಕುತ್ತಿಲ್ಲ ಅಂತ ಕಾಮೆಂಟ್​ ಮಾಡುತ್ತಿದ್ದರು. ಇದೀಗ ಡಿವೋರ್ಸ್‌ ಬೆನ್ನಲ್ಲೇ ಇನ್​ಸ್ಟಾಗ್ರಾಮ್​​​ ಖಾತೆಯಲ್ಲಿ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಡಿಯೋ ನೋಡಿದ ಕೆಲ ಅಭಿಮಾನಿಗಳು ಖುಷ್ ಆಗಿದ್ದಾರೆ. ಜೊತೆಗೆ ಮತ್ತೆ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ ವೆಲ್​ಕಮ್​ ಮಾಡುತ್ತಿದ್ದಾರೆ.

ಈ ಇಬ್ಬರ ಮಧ್ಯೆ ಲವ್​ ಶುರುವಾಗಿ ಕೊನೆಗೆ ಆಗಿದ್ದೇನು?

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. 2020ರಲ್ಲಿ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರ ಮದುವೆಯನ್ನು ಕುಟುಂಬಸ್ಥರು ಬಹಳ ಅದ್ಧೂರಿಯಾಗಿ ಮಾಡಿದ್ದರು. ಈ ತಾರಾ ಜೋಡಿ ರಾಜ-ರಾಣಿ ಸೇರಿದಂತೆ ಕನ್ನಡದ ಹಲವು ರಿಯಾಲಿಟಿ ಶೋಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸೆನ್ಸೇಷನ್​​ ಕ್ರಿಯೇಟ್ ಮಾಡಿದ್ದರು. ಆದರೆ ಮೊನ್ನೆ ಮೊನ್ನೆಯಷ್ಟೇ ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿ ದೂರ ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಿವೋರ್ಸ್‌ ಬೆನ್ನಲ್ಲೇ ಚಂದನ್​ ಶೆಟ್ಟಿ ಮಾಜಿ ಪತ್ನಿ ಪ್ರತ್ಯಕ್ಷ; ನಿವೇದಿತಾ ಗೌಡ ವಿಡಿಯೋ ವೈರಲ್!

https://newsfirstlive.com/wp-content/uploads/2024/06/nivedita1.jpg

Load More