/newsfirstlive-kannada/media/post_attachments/wp-content/uploads/2024/08/Team-India-1.jpg)
ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ಒನ್ ಡೇ ಸೀರೀಸ್ ಆಡಲಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 6ನೇ ತಾರೀಕಿನಿಂದ ಶುರುವಾಗಲಿದೆ. ಇದಾದ ಮೇಲೆ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದ್ದು, ಪಾಕಿಸ್ತಾನ ಆಯೋಜಿಸಲಿದೆ. ಭಾರತದ ಪಂದ್ಯಗಳು ಯುಎಇನಲ್ಲಿ ನಡೆಯಲಿವೆ.
ಇನ್ನು, ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ. ಇತ್ತೀಚೆಗೆ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕನ್ನಡಿಗ ಕರುಣ್ ನಾಯರ್ ಕಮ್ಬ್ಯಾಕ್ ಸೂಚನೆ ನೀಡಿದ್ದರು. ಅದರಲ್ಲೂ ಈ ಬಾರಿಯ ವಿಜಯ ಹಜಾರೆ ಟೂರ್ನಿಯಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಅಬ್ಬರಿಸಿದ್ರು. ಇಷ್ಟಾದ್ರೂ ಬಿಸಿಸಿಐ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿಲ್ಲ ಎಂಬುದು ಅಚ್ಚರಿ.
ಕರುಣ್ ನಾಯರ್ ಅದ್ಭುತ ಪ್ರದರ್ಶನ
2025ರ ವಿಜಯ ಹಜಾರೆ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆ ಹಾಕಿದ ಬ್ಯಾಟರ್ ಕರುಣ್ ನಾಯರ್. ತಾನು ಆಡಿರೋ 6 ಇನಿಂಗ್ಸ್ನಲ್ಲಿ ಕರುಣ್ ನಾಯರ್ ಬರೋಬ್ಬರಿ 5 ಶತಕ ಹಾಗೂ 1 ಅರ್ಧಶತಕ ಚಚ್ಚಿದ್ದರು. 700ಕ್ಕೂ ಹೆಚ್ಚು ಆವರೇಜ್ನಲ್ಲಿ ಸುಮಾರು 752 ರನ್ ಕಲೆ ಹಾಕಿದ್ರೂ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಕರುಣ್ ನಾಯರ್ಗೆ ಅವಕಾಶ ನೀಡಿಲ್ಲ.
ಕನ್ನಡಿಗನ ಸಾಧನೆ
ಕರುಣ್ ನಾಯರ್ ಟೀಮ್ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನಾಡಿದ್ದರು. ತಾನು ಆಡಿದ್ದ 7 ಇನಿಂಗ್ಸ್ಗಳಲ್ಲಿ ತ್ರಿಶತಕ ಸಿಡಿಸುವ ಮೂಲಕ ಮಿಂಚಿದ್ದರು. ತ್ರಿಪಲ್ ಸೆಂಚುರಿ ಬಳಿಕ ವಿಫಲರಾದ ಕಾರಣ ಇವರನ್ನು ಟೀಮ್ ಇಂಡಿಯಾದಿಂದ ಕೈ ಬಿಡಲಾಗಿತ್ತು. ಇನ್ನು 2 ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಕರುಣ್ ನಾಯರ್ 46 ರನ್ ಬಾರಿಸಿದ್ದರು. 2017ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು.
ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.
ಇದನ್ನೂ ಓದಿ:Champions Trophy 2025; ಟೀಮ್ ಇಂಡಿಯಾದಲ್ಲಿ ಯಾರ್ ಯಾರಿಗೆ ಸ್ಥಾನ?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ