/newsfirstlive-kannada/media/post_attachments/wp-content/uploads/2025/01/Rohit-Sharma_Ajit-Agarkar.jpg)
ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ಒನ್ ಡೇ ಸೀರೀಸ್ ಆಡಲಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 6ನೇ ತಾರೀಕಿನಿಂದ ಶುರುವಾಗಲಿದೆ. ಇದಾದ ಮೇಲೆ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದ್ದು, ಪಾಕಿಸ್ತಾನ ಆಯೋಜಿಸಲಿದೆ. ಭಾರತದ ಪಂದ್ಯಗಳು ಯುಎಇನಲ್ಲಿ ನಡೆಯಲಿವೆ.
ಇನ್ನು, ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡ ಕಟ್ಟುವ ನಿಟ್ಟಿನಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಲಿದೆ. ಹಾಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ.
ನಾಳೆಯೇ ಟೀಮ್ ಇಂಡಿಯಾ ಪ್ರಕಟ
ಜನವರಿ 18ನೇ ತಾರೀಕಿನಂದು ಉಭಯ ಸರಣಿಗಳಿಗೆ ತಂಡ ಪ್ರಕಟಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಬಿಗ್ ಅಪ್ಡೇಟ್ ಕೊಟ್ಟಿದೆ. ತಂಡ ಪ್ರಕಟದ ಬಳಿಕ ಮಧ್ಯಾಹ್ನ 12.30ಕ್ಕೆ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ, ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ ಅಗರ್ಕರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಪತ್ರಿಕಾಗೋಷ್ಠಿಗೆ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಇರುವುದಿಲ್ಲ.
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೂ ಮುನ್ನ ಭಾರತ 5 ಪಂದ್ಯಗಳ ಟಿ20 ಸರಣಿ ಜನವರಿ 22ನೇ ತಾರೀಕಿನಿಂದ ಆಡಲಿದೆ. ಈ ಸರಣಿ ಮೊದಲ ಪಂದ್ಯ ಕೋಲ್ಕತ್ತಾದಲ್ಲಿ ನಡೆದರೆ, 2ನೇ ಪಂದ್ಯ ಜ.25 ರಂದು ಚೆನ್ನೈನಲ್ಲಿ ನಡೆಯಲಿದೆ. 3ನೇ ಪಂದ್ಯ ಜ.28ರಂದು ರಾಜ್‌ಕೋಟ್‌ನಲ್ಲಿ, 4ನೇ ಪಂದ್ಯ ಜ.31 ರಂದು ಪುಣೆಯಲ್ಲಿ, ಕೊನೆಯ ಪಂದ್ಯ ಫೆ.2 ರಂದು ಮುಂಬೈನಲ್ಲಿ ನಡೆಯಲಿದೆ.
ಈ ಬಾರಿ ಚಾಂಪಿಯನ್ಸ್ ಟ್ರೋಫಿ ಏಕದಿನ ಫಾರ್ಮೆಟ್‌ನಲ್ಲಿ ನಡೆಯಲಿದೆ. ಪಾಕಿಸ್ತಾನ ಹಾಗೂ ದುಬೈನಲ್ಲಿ ಪಂದ್ಯಗಳು ನಡೆಯಲಿವೆ. 8 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ.
ಇದನ್ನೂ ಓದಿ:ಯುವ ಸಂಸದೆಯೊಂದಿಗೆ ಸ್ಟಾರ್ ಕ್ರಿಕೆಟರ್ ರಿಂಕು ಸಿಂಗ್ ನಿಶ್ಚಿತಾರ್ಥ? ಯಾರು ಈ ಸುಂದರಿ?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ