ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಕುರಿತು ಪ್ರಶ್ನೆ
ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ
ಸದ್ಯ ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಪೆಂಡಿಂಗ್ ಇದೆ
ಸಂವಿಧಾನದಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಅವಕಾಶ ಇಲ್ಲವೆಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ.
ಬಿಜೆಪಿಯ ರಾಜ್ಯಸಭಾ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಂದ್ರ ಸರ್ಕಾರಕ್ಕೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಕುರಿತು ಪ್ರಶ್ನಿಸಿದ್ದರು. ಈ ಕುರಿತಂತೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ನಾರಾಯಣ ಸ್ವಾಮಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ಕೊಟ್ಟಿದ್ದಾರೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿಯು ಸದ್ಯ ಸುಪ್ರೀಂ ಕೋರ್ಟ್ ನಲ್ಲಿ ಪೆಂಡಿಂಗ್ ಇದೆ. ಸುಪ್ರೀಂ ಕೋರ್ಟ್ ನ ಸಂವಿಧಾನಿಕ ಪೀಠವು ಏಳು ಅಥವಾ ಅದಕ್ಕಿಂತ ಹೆಚ್ಚಿನ ಜಡ್ಜ್ ಪೀಠಕ್ಕೆ ವಹಿಸಲು ಸಿಜೆಗೆ ಮನವಿ ಮಾಡಿದೆ ಎಂದು ಹೇಳಿದ್ದಾರೆ.
341 ನೇ ವಿಧಿಗೆ ತಿದ್ದುಪಡಿ ಮಾಡಬೇಕು
ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನೀಡಲು ಸಂವಿಧಾನದ 341 ನೇ ವಿಧಿಗೆ ತಿದ್ದುಪಡಿ ಮಾಡಬೇಕು ಎಂದು ಹೇಳಿತ್ತು. ಹಾಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು. ಆದರೆ 20 ರಾಜ್ಯ ಸರ್ಕಾರಗಳು ಮಾತ್ರ ಇದುವರೆಗೂ ಅಭಿಪ್ರಾಯ ನೀಡಿವೆ. ಏಳು ರಾಜ್ಯ ಸರ್ಕಾರಗಳು ಒಳಮೀಸಲಾತಿ ನೀಡಿಕೆಗೆ ಸಂವಿಧಾನ ತಿದ್ದುಪಡಿಗೆ ಬೆಂಬಲ ಸೂಚಿಸಿವೆ. ಆದರೆ 13 ರಾಜ್ಯ ಸರ್ಕಾರ, ಒಂದು ಕೇಂದ್ರಾಡಳಿತ ಪ್ರದೇಶ ಒಳ ಮೀಸಲಾತಿ ನೀಡಿಕೆಗೆ ಸಂವಿಧಾನ ತಿದ್ದುಪಡಿಗೆ ವಿರೋಧ ಸೂಚಿಸಿವೆ. ಇನ್ನು ಒಂದು ಕೇಂದ್ರಾಡಳಿತ ಪ್ರದೇಶ ಯಾವುದೇ ಅಭಿಪ್ರಾಯ ನೀಡಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ