newsfirstkannada.com

CAA ಜಾರಿಗೆ ತಡೆ ಇಲ್ಲ ಎಂದ ಸುಪ್ರೀಂ ಕೋರ್ಟ್​; ಕೇಂದ್ರ ಸರ್ಕಾರಕ್ಕೂ ಡೆಡ್​​ಲೈನ್​..!

Share :

Published March 20, 2024 at 6:30am

Update March 20, 2024 at 7:53am

    ಸಿಎಎ ಜಾರಿಗೆ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರ

    ಸಿಎಎ ಜಾರಿ ವಿರುದ್ಧ 237 ಅರ್ಜಿಗಳು ಸುಪ್ರೀಂಗೆ ಸಲ್ಲಿಕೆ ಆಗಿದೆ

    ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯಿಸಲು ಗಡುವು ನೀಡಿದ ಕೋರ್ಟ್

ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ 3 ವಾರಗಳ ಕಾಲಾವಕಾಶ ನೀಡಿದೆ.

ಸಿಎಎ ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಗೆ 237 ಅರ್ಜಿಗಳು ಸಲ್ಲಿಕೆಯಾಗಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು, 2024 ರ CAA ನಿಯಮಗಳಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ಏಪ್ರಿಲ್ 9ರೊಳಗೆ ಗಡುವು ನೀಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿ ವಿದೇಶದಿಂದ ಭಾರತಕ್ಕೆ ವಲಸೆ ಬಂದವರಿಗೆ ಪೌರತ್ವ ನೀಡಲಾಗುತ್ತದೆ. ಮುಸ್ಲಿಮರನ್ನು ಹೊರತುಪಡಿಸಿ ಬೇರೆ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಲಾಗುತ್ತದೆ. ಹಿಂದೂ, ಕ್ರೈಸ್ತ, ಸಿಖ್ಖ್, ಬೌದ್ಧ, ಪಾರ್ಸಿ ಸಮುದಾಯಗಳಿಗೆ ಭಾರತದ ಪೌರತ್ವ ನೀಡಲಾಗುವುದು. ಈಗಾಗಲೇ ಲೋಕಸಭೆ, ರಾಜ್ಯಸಭೆಯಲ್ಲಿ ಸಿಎಎ ಕಾಯ್ದೆ ಅಂಗೀಕಾರವಾಗಿದೆ. 2014ರ ಡಿಸೆಂಬರ್ 30ಕ್ಕೂ ಮುಂಚಿತವಾಗಿ ಭಾರತಕ್ಕೆ ವಲಸೆ ಬಂದವರಿಗೆ ಭಾರತದ ಪೌರತ್ವ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಇಂದಿನಿಂದಲೇ ಹೊಸ ನಿಯಮ ರೂಪಿಸಿ ಜಾರಿಗೆ ಅಧಿಸೂಚನೆ ಹೊರಡಿಸಿದೆ. ಈ ಸಿಎಎ ಜಾರಿಯಿಂದ ಭಾರತದ ಯಾವುದೇ ನಾಗರಿಕರ ಪೌರತ್ವಕ್ಕೆ ತೊಂದರೆ ಆಗುವುದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CAA ಜಾರಿಗೆ ತಡೆ ಇಲ್ಲ ಎಂದ ಸುಪ್ರೀಂ ಕೋರ್ಟ್​; ಕೇಂದ್ರ ಸರ್ಕಾರಕ್ಕೂ ಡೆಡ್​​ಲೈನ್​..!

https://newsfirstlive.com/wp-content/uploads/2024/03/CAA-1.jpg

Load More