‘ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ’.. ನಟ ದರ್ಶನ್‌ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್‌

author-image
admin
Updated On
'ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ’.. ದರ್ಶನ್​ ವಿರುದ್ಧ  ಕೆಂಡಾಮಂಡಲ; ದಾಖಲಾಯ್ತು ದೂರು
Advertisment
  • ಶ್ರೀರಂಗಪಟ್ಟಣದ ಬೆಳ್ಳಿ ಪರ್ವ ಸಮಾರಂಭದಲ್ಲಿ ಮಾತನಾಡಿದ್ದ ನಟ ದರ್ಶನ್
  • ಸಾರ್ವಜನಿಕ ಸಮಾರಂಭದಲ್ಲಿ ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ
  • ನೋಟಿಸ್ ತಲುಪಿದ 10 ದಿನದಲ್ಲಿ ಬಂದು ವಿವರಣೆ ನೀಡಲು ಸೂಚನೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನೋಟಿಸ್ ತಲುಪಿದ 10 ದಿನದಲ್ಲಿ ಬಂದು ವಿವರಣೆ ನೀಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ‘ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ’.. ದರ್ಶನ್​ ವಿರುದ್ಧ ಕೆಂಡಾಮಂಡಲ; ದಾಖಲಾಯ್ತು ದೂರು

ನಟ ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಾರ್ವಜನಿಕ ಸಮಾರಂಭದಲ್ಲಿ ದರ್ಶನ್ ಅವರು ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಗೌಡತಿಯರ ಸೇನೆ ಮಹಿಳಾ ಆಯೋಗಕ್ಕೆ ದೂರು ನೀಡಿತ್ತು.

publive-image

ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದ ಗೌಡತಿಯರ ಸೇನೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಗೌಡತಿಯರ ಸೇನೆ ರಾಜ್ಯಾಧ್ಯಕ್ಷರಾದ ಶ್ರೀಮತಿ ರೇಣುಕಾ ಅವರ ದೂರಿನ ಮೇರೆಗೆ ರಾಜ್ಯ ಮಹಿಳಾ ಆಯೋಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ 10 ದಿನದಲ್ಲಿ ಈ ಕುರಿತು ವಿವರಣೆ ನೀಡಲು ಸೂಚಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment