/newsfirstlive-kannada/media/post_attachments/wp-content/uploads/2023/12/Corona-2.jpg)
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಮತ್ತೆ ರಾಜ್ಯಕ್ಕೆ ವಕ್ಕರಿಸಲು ಪ್ರಾರಂಭಿಸಿದೆ. ಕೋವಿಡ್-19 ಹೊಸ ರೂಪಾಂತರ ಭಯ ಹುಟ್ಟಿಸಿದೆ. ರಾಜ್ಯದಲ್ಲಿ 100ರ ಗಡಿ ದಾಟುವ ಮೂಲಕ ಮತ್ತೆ ಆತಂಕದ ವಾತಾವರಣ ಮೂಡಿಸಿದೆ.
ಕೊರೊನಾ ಕ್ರಿಮಿಯಿಂದ ಹರಡೋ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸ್ತಿದೆ. ಆದರೂ ಚೀನಾದ ಈ ಸೋಂಕು ಆಮೆಗತಿಯಲ್ಲಿ ಹೆಚ್ಚಾಗ್ತಿದೆ.
ಇದನ್ನೂ ಓದಿ: ಕೊರೊನಾ ಆತಂಕದ ಮಧ್ಯೆ ಇಂದಿನಿಂದ ಶಾಲೆ ಆರಂಭ; ಪೋಷಕರು ಓದಲೇಬೇಕಾದ ಸ್ಟೋರಿ ಇದು!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊವಿಡ್-19 ಸೋಂಕು ಕಂಡುಬಂದಿದ್ದು, ಸೈಲೆಂಟ್ ಆಗಿಯೇ ಮತ್ತೆ ರಾಜ್ಯದಲ್ಲಿ ತನ್ನ ಅಧಿಪತ್ಯ ಸಾಧಿಸುತ್ತಿದೆ. ನಿನ್ನೆ ಬೆಳಗ್ಗೆವರೆಗೂ ಒಟ್ಟು 100 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿತ್ತು. ಸಂಜೆಯೊಳಗೆ ಮತ್ತಷ್ಟು ಪ್ರಕರಣಗಳು ಪತ್ತೆಯಾಗಿವೆ. ಆದ್ರೆ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ. ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿ ಮೃತಪಟ್ಟಿದ್ದಾರೆ. ನಿನ್ನೆಯಷ್ಟೇ ಕೋವಿಡ್ ಪಾಸಿಟಿವ್ ಅಂತಾ ಟೆಸ್ಟ್ನಲ್ಲಿ ಪತ್ತೆಯಾಗಿತ್ತು. ಆದ್ರೆ ತಡರಾತ್ರಿ ಚಿಕಿತ್ಸೆ ಫಲಿಸದೆ ರೋಗಿ ನಿಧನರಾಗಿದ್ದಾರೆ. ಮೃತ ವ್ಯಕ್ತಿಯೂ ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಬೀಮ್ಸ್ ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ದಾಖಲು ಮಾಡಲಾಗಿತ್ತು. ಪಾಸಿಟಿವ್ ಅಂತಾ ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದ ಕಾರಣ ರೋಗಿ ನಿಧನರಾಗಿದ್ದಾರೆ.
ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 126ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್ಗಳು 100 ದಾಟಿ 126ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 126ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 40 ಹೊಸ ಕೊರೊನಾ ಪ್ರಕರಣ ದೃಢಪಟ್ಟಿವೆ. ಕಳೆದ 24 ಗಂಟೆಯಲ್ಲಿ 14 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಕಳೆದ 24 ಗಂಟೆಯಲ್ಲಿ ಒಟ್ಟು 395 ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 344 RTPCR ಹಾಗೂ 51 RAT ಪರೀಕ್ಷೆ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 10.12 ರಷ್ಟಿದ್ದು, ಸಾವಿನ ದರ ಶೂನ್ಯವಾಗಿದೆ.
ಈಗಾಗಲೇ ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆಗಳತ್ತ ಮುಖ ಮಾಡ್ತಿದ್ದಾರೆ. ಇದರ ನಡುವೆ ಕೊರೊನಾ ಬೀತಿ ಪೋಷಕರ ನಿದ್ದೆಗಡೆಸಿದೆ. ಒಬ್ಬರಿಂದ ಒಬ್ಬರಿಗೆ ಹರಡೋ ಭಯದ ಭೀತಿಯಿಂದ ಸೋಂಕಿನ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚಿಸಲಾಗಿದೆ. ಇತ್ತ ಸರ್ಕಾರ ಅಗತ್ಯ ಕ್ರಮಗಳನ್ನ ತೆಗೆದುಕೊಳ್ತಿದ್ರೂ ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಗೆ ತಲೆನೋವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ