/newsfirstlive-kannada/media/post_attachments/wp-content/uploads/2025/05/Corona.jpg)
ಇಡೀ ಜಗತ್ತನ್ನೇ ನಡುಗಿಸಿದ್ದ ಮಹಾಮಾರಿ ಕೊರೊನಾ ಮತ್ತೆ ರಾಜ್ಯದಲ್ಲಿ ಸಕ್ರಿಯವಾಗಿದೆ. ದಿನದಿಂದ ದಿನಕ್ಕೆ ಕೋವಿಡ್​-19 ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಮೊದಲ ಬಲಿಯನ್ನು ಪಡೆದಿದೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗ್ತಿರೋ ಹಿನ್ನೆಲೆ ಆರೋಗ್ಯ ಇಲಾಖೆ ಟೆಸ್ಟ್ ಕಡ್ಡಾಯಗೊಳಿಸೋ ಜೊತೆಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಮುಂದಾಗಿದೆ.
ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನಲ್ಲಿದ್ದು, ಓರ್ವ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಟೆಸ್ಟ್‌ಗೆ ಒಳಪಡಿಸಿದೆ. ಕಳೆದ 24 ಗಂಟೆಯಲ್ಲಿ 9 ಹೊಸ ಪ್ರಕರಣ ದಾಖಲಾಗಿದೆ.
/newsfirstlive-kannada/media/post_attachments/wp-content/uploads/2025/05/Covid-health-bulletine.jpg)
ರಾಜ್ಯದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚುತ್ತಿರೋ ಹಿನ್ನೆಲೆ ಕೊರೊನಾ ಟೆಸ್ಟ್​ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದು, ಇಂದಿನಿಂದಲೇ ಆರಂಭವಾಗಿದೆ. ಅದ್ರಲ್ಲೂ ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕೊರೊನಾ ಟೆಸ್ಟ್​ ಕಡ್ಡಾಯಗೊಳಿಸಲಾಗಿದೆ. ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಎಲ್ಲ ಆಸ್ಪತ್ರೆಗಳಿಗೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಕೊರೊನಾಗೆ ಬೆಂಗಳೂರಲ್ಲಿ ಮೊದಲ ಬಲಿ.. ​ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಆರೋಗ್ಯ ಇಲಾಖೆ ನಾಳೆಯಿಂದ ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದೆ. 5 ಪರ್ಸೆಂಟ್​ಗಿಂತ ಜಾಸ್ತಿ ಪಾಸಿಟಿವ್ ಕೇಸ್ ಆದ್ರೆ ಪರಿಸ್ಥಿತಿ ಗಂಭೀರವಾಗಲಿದೆ. ಮಾಸ್ಕ್ ಕಡ್ಡಾಯ ಲಾಕ್ ಡೌನ್ ಎಲ್ಲವೂ ಹೆಲ್ತ್ ಬುಲೆಟಿನ್ ಮೇಲ್ ನಿರ್ಧಾರವಾಗಲಿದೆ. ಒಂದೊಮ್ಮೆ ಪಾಸಿಟಿವಿಟಿ ರೇಟ್ ಕಡಿಮೆ ಇದ್ರೆ ಆತಂಕ ಪಡೋ ಅಗತ್ಯ ಇಲ್ಲ. ಪಾಸಿಟಿವಿಟಿ ರೇಟ್ ನೋಡಿ ತಾಂತ್ರಿಕ ಸಲಹಾ ಸಮಿತಿ ಮತ್ತೊಮ್ಮೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧರಿಸಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us