ಭೀಕರ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರು
ಇವತ್ತು ರಾತ್ರಿ 1ಗಂಟೆ ಸುಮಾರಿಗೆ 2 ಬಸ್ಗಳ ನಡುವೆ ಡಿಕ್ಕಿ
ಕತ್ತಲಲ್ಲೇ ಪ್ರಯಾಣಿಕರು ನೋವಿನಿಂದ ಕಿರುಚಾಟ, ಚೀರಾಟ
ಒಡಿಶಾ: ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಪರಸ್ಪರ ಡಿಕ್ಕಿಯಾಗಿ ಸ್ಥಳದಲ್ಲೇ 12 ಜನರು ಸಾವನ್ನಪ್ಪಿದ್ದು ಇನ್ನು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಒಡಿಶಾದ ಗಂಜಾಂ ಜಿಲ್ಲೆಯ ದಿಗಪಹಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇವತ್ತು ರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ.
ಎರಡು ಬಸ್ನಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಬರ್ಹಾಂಪುರದಲ್ಲಿನ MKCG ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಚಿಂತಾಜನಕ ಪರಿಸ್ಥಿತಿಯಲ್ಲಿರುವ ಪ್ರಯಾಣಿಕರನ್ನು ಕಟಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ನಲ್ಲಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರುವುದು ಮತ್ತು ಗಾಯಗೊಂಡಿರುವುದು ಎನ್ನಲಾಗಿದೆ. ಇದು ಅಲ್ಲದೇ ಅಪಘಾತಕ್ಕೀಡಾದ ಬಸ್ಗಳ ಪೈಕಿ ಒಬ್ಬ ಡ್ರೈವರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಇನ್ನೊಬ್ಬ ಬಸ್ ಚಾಲಕನಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿದು ಬಂದಿದೆ.
ಇನ್ನು ಒಡಿಶಾ ಸರ್ಕಾರಿ ಬಸ್ ರಾಯಗಡದಿಂದ ಭುವನೇಶ್ವರಕ್ಕೆ ತೆರಳುತ್ತಿತ್ತು. ಖಾಸಗಿ ಬಸ್ ಬೆರ್ಹಾಂಪುರ ಜಿಲ್ಲೆಯ ಖಂಡದೇಲಿ ಗ್ರಾಮದ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿತ್ತು. ಈ ವೇಳೆ ಗಂಜಾಂ ಜಿಲ್ಲೆಯ ದಿಗಪಹಂಡಿ ಬಳಿಯ ಹೆದ್ದಾರಿಯಲ್ಲಿ ಬರುತ್ತಿದ್ದಂತೆ ಎರಡು ಬಸ್ಗಳು ರಭಸದಿಂದ ಡಿಕ್ಕಿ ಹೊಡೆದಿವೆ. ಪರಿಣಾಮ ಎರಡು ಬಸ್ನಲ್ಲಿದ್ದವರು ಕೆಲವರು ಮೃತಪಟ್ಟರೇ ಇನ್ನು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ವೇಳೆ ಗಾಯಗೊಂಡ ಪ್ರಯಾಣಿಕರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಯಿತು. ಆದ್ರೆ ಎರಡು ಬಸ್ಗಳ ನಡುವೆ ಡಿಕ್ಕಿ ಯಾಕೆ ಸಂಭವಿಸಿತು ಎಂಬುವುದಕ್ಕೆ ನಿಖರ ಕಾರಣ ತಿಳಿದಿಲ್ಲ ಎಂದು ಬೆರ್ಹಾಂಪುರ ಠಾಣೆಯ ಎಸ್ಪಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ