/newsfirstlive-kannada/media/post_attachments/wp-content/uploads/2024/10/JOBS_TEACHERS.jpg)
ಭುವನೇಶ್ವರ್: ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ವಿವಿಧ ಯೋಜನೆ ಭಾಗವಾಗಿ 16 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ ಅವರು ಕೇವಲ ಒಂದೇ ದಿನದಲ್ಲಿ ನೇಮಕ ಮಾಡಿದ್ದಾರೆ. ರಾಜ್ಯದ 30 ಜಿಲ್ಲೆಗಳಲ್ಲಿನ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡಿದಂತೆ ಆಗಿದೆ ಎಂದು ತಿಳಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/10/odisha_TEACHER.jpg)
ಇದನ್ನೂ ಓದಿ:ಮೈಸೂರು ಜಿಲ್ಲಾ ಪಂಚಾಯತಿಯಿಂದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.. PUC ಆದವರಿಗೆ ಚಾನ್ಸ್​
ಒಡಿಶಾದ ಕಳಿಂಗ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅತಿಥಿಗಳಾಗಿ ಭಾಗವಹಿಸಿದ್ದರು. ಇವರ ಸಮ್ಮುಖದಲ್ಲೇ ಸಿಎಂ ಮೋಹನ್ ಮಾಝಿ ಅವರು ಎಲ್ಲ ಶಿಕ್ಷಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರ ಮಾಡಿದರು. ಇದೇ ವೇಳೆ ಮಾತನಾಡಿ, ರಾಜ್ಯದಲ್ಲಿ ನೇಮಕಾತಿಗಳನ್ನು ವೇಗವಾಗಿ ಪೂರ್ಣಗೊಳಿಸಲಾಗುತ್ತಿದೆ. ಶಿಕ್ಷಣಕ್ಕಾಗಿ ಬಜೆಟ್​​ನಲ್ಲಿ ಹೆಚ್ಚಿನ ಅನುದಾನ ಎತ್ತಿಡಲಾಗುತ್ತಿದೆ. ಈ ಬಾರಿಯು ಸರ್ಕಾರ ಹೆಚ್ಚಿನ ಮಟ್ಟದಲ್ಲಿ ಅನುದಾನ ತೆಗೆದಿಡುತ್ತದೆ ಎಂದು ಹೇಳಿದ್ದಾರೆ.
/newsfirstlive-kannada/media/post_attachments/wp-content/uploads/2024/10/JOB_TEACHER.jpg)
ಇದನ್ನೂ ಓದಿ: ISRO ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿ; ಸ್ಯಾಲರಿ ₹67,700.. ಇಂದೇ ಅಪ್ಲೇ ಮಾಡಿ!
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಮೋಹನ್ ಚರಣ್ ಮಾಝಿ, ರಾಜ್ಯದ 30 ಜಿಲ್ಲೆಗಳಿಗೂ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಕೆಲಸ ಅತಿ ಮುಖ್ಯವಾದದ್ದು ಆಗಿದೆ. ಇದು ಮುಂದಿನ ಪೀಳಿಗೆಯನ್ನು ರೂಪಿಸುತ್ತದೆ. ಪುರಾತನ ಕಾಲದಲ್ಲಿ ಗುರುವನ್ನು ಬ್ರಹ್ಮ, ವಿಷ್ಣು, ಮಹೇಶ್ವರನಿಗೆ ಹೋಲಿಸುತ್ತಿದ್ದರು. ಸದ್ಯ ಸರ್ಕಾರ ಭರವಸೆಗಳನ್ನು ವೇಗವಾಗಿ ಪೂರೈಸುತ್ತಿದೆ. ಶಾಲಾ ಶಿಕ್ಷಣ ಕ್ಷೇತ್ರಕ್ಕೆ ಹೊಸದಾಗಿ 16,009 ಶಿಕ್ಷಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರ ಮಾಡಲಾಗಿದೆ. ಈ ದೊಡ್ಡ ನೇಮಕಾತಿಯು ಶಿಕ್ಷಣದಲ್ಲಿ ಪಾರದರ್ಶಕತೆಯನ್ನು ತರಲಿದೆ ಎಂದು ಸಿಎಂ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us