newsfirstkannada.com

BREAKING: ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್‌ನ್ಯೂಸ್; ಜುಲೈ 19ರಂದೇ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ

Share :

15-07-2023

  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮತ್ತೊಂದು ಗ್ಯಾರಂಟಿ ಚಾಲನೆ

  ಕೊನೆಗೂ ಮುಹೂರ್ತ ನಿಗದಿಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

  ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಪ್ರಿಯಾಂಕಾ ಗಾಂಧಿ ಬರೋದಿಲ್ವಾ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷ್ಮೀ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ಜುಲೈ 19ರ ಸಂಜೆ 5 ಗಂಟೆಗೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ಓದಿ: Breaking News: ‘ಗೃಹ ಲಕ್ಷ್ಮೀ’ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇರಲ್ಲ; ಯಾವಾಗಿಂದ ಅರ್ಜಿ ಸ್ವೀಕಾರ..?

ರಾಜ್ಯದ ಬಹಳಷ್ಟು ಗೃಹಿಣಿಯರು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವುದನ್ನೇ ಎದುರು ನೋಡ್ತಿದ್ದಾರೆ. ಇಷ್ಟು ದಿನ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುತ್ತಿದ್ದೇವೆ ಎನ್ನುತ್ತಿದ್ದ ಸರ್ಕಾರ ಕೊನೆಗೂ ದಿನಾಂಕ, ಸಮಯ ನಿಗದಿ ಮಾಡಿದೆ. ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರೇ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡುತ್ತಿದ್ದಾರೆ. ಇಷ್ಟು ದಿನ ಪ್ರಿಯಾಂಕಾ ಗಾಂಧಿ ಸೇರಿದಂತೆ ಬೇರೆ ದೆಹಲಿ ಕಾಂಗ್ರೆಸ್ ನಾಯಕರು ಬರುವ ನಿರೀಕ್ಷೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರಿದ್ದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರೇ ರಾಜ್ಯದ ನಾರಿಯರಿಗೆ ಗೃಹಲಕ್ಷ್ಮೀ ಯೋಜನೆಗೆ ಗ್ಯಾರಂಟಿ ಭರವಸೆ ನೀಡಿದ್ದರು. ಇದೀಗ ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದಲೇ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆಯೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಸಂಬಂಧ ಸುದ್ದಿಗೋಷ್ಟಿ ಕರೆದಿದ್ರು. ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರನ್ನು ಸಂಪರ್ಕ ಮಾಡುತ್ತಿದ್ದೇವೆ. ಮಧ್ಯಾಹ್ನ ಅದು ಗೊತ್ತಾಗಲಿದೆ. ರಾಷ್ಟ್ರೀಯ ನಾಯಕರು ಬರುವುದಾದ್ರೆ ಕಾರ್ಯಕ್ರಮದ ರೂಪುರೇಷೆ ತಿಳಿಸುತ್ತೇವೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವುಕುಮಾರ್ ಅವರು ರಾಷ್ಟ್ರೀಯ ನಾಯಕರ ಸಂಪರ್ಕದಲ್ಲಿದ್ದಾರೆ ಎಂದಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್‌ನ್ಯೂಸ್; ಜುಲೈ 19ರಂದೇ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ

https://newsfirstlive.com/wp-content/uploads/2023/06/Gruha-Lakshmi-2.jpg

Load More