ಪ್ರತಿಯೊಬ್ಬರ ಸುರಕ್ಷತೆ, ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯ -ದುರಂತದ ಬಗ್ಗೆ RCB ಹೇಳಿದ್ದೇನು..?

author-image
Ganesh
Updated On
ಹೈದರಾಬಾದ್ ವಿರುದ್ಧ ಹೀನಾಯ ಸೋಲು; RCB ಫ್ಯಾನ್ಸ್​ಗೆ ಮತ್ತೊಂದು ಶಾಕಿಂಗ್ ಸುದ್ದಿ!
Advertisment
  • ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು
  • ಭೀಕರ ದುರಂತಕ್ಕೆ ಶೋಕ ವ್ಯಕ್ತಪಡಿಸಿದ RCB
  • ಆರ್​ಸಿಬಿ ಅಧಿಕೃತ ಹೇಳಿಕೆಯಲ್ಲಿ ಹೇಳಿದ್ದೇನು..?

ಚಿನ್ನಸ್ವಾಮಿ ಕ್ರಿಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿ 11 ಮಂದಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ಆರ್​ಸಿಬಿ ಆಟಗಾರರನ್ನ, ಟ್ರೋಫಿಯನ್ನ, ಕಣ್ತುಂಬಿಕೊಳ್ಳೋಕೆ ಬಂದಿದ್ದ ಫ್ಯಾನ್ಸ್​ ಸ್ಟೇಡಿಯಂ ಒಳಗೆ ನುಗ್ಗೋಕೆ ಯತ್ನಿಸಿದ್ದರು. ವೇಳೆ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ. ಹಲವರು ಅಸ್ವಸ್ಥಗೊಂಡಿದ್ದು, ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರ್​ಸಿಬಿ ಹೇಳಿದ್ದೇನು..?

ಮಾಧ್ಯಮಗಳ ಮೂಲಕ ಬೆಳಕಿಗೆ ಬಂದ ಇಂದಿನ ಘಟನೆ ಬಗ್ಗೆ ತೀವ್ರ ನೊಂದಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ಜೀವ ಕಳೆದುಕೊಂಡವರಿಗಾಗಿ ಆರ್​ಸಿಬಿ ಶೋಕಿಸುತ್ತಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದೆ. ಪರಿಸ್ಥಿತಿ ಬಗ್ಗೆ ತಿಳಿದ ತಕ್ಷಣವೇ ಕಾರ್ಯಕ್ರಮದಲ್ಲಿ ತಿದ್ದುಪಡಿ ಮಾಡಿಕೊಂಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಗಳನ್ನು ಅನುಸರಿಸಿದ್ದೇವೆ. ಆರ್​ಸಿಬಿಯ ಎಲ್ಲಾ ಬೆಂಬಲಿಗರು ದಯವಿಟ್ಟು ಸುರಕ್ಷಿತವಾಗಿರಲು ವಿನಂತಿಸುತ್ತೇವೆ.. ಅಂತಾ ಆರ್​ಸಿಬಿ ಸ್ಟೇಟ್​​ಮೆಂಟ್ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ.. ಟ್ವೀಟ್ ಮಾಡಿ ಏನಂದ್ರು..?

ಆಗಿದ್ದೇನು..?

ಐಪಿಎಲ್​ ಫೈನಲ್​ನಲ್ಲಿ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್​ ಅನ್ನು ಸೋಲಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದೇ ಖುಷಿಯಲ್ಲಿ ರಾಜ್ಯ ಸರ್ಕಾರ ವಿಧಾನಸೌಧದ ಮುಂಭಾಗದಲ್ಲಿ ಆರ್​ಸಿಬಿ ಟೀಂಗೆ ಹಾಗೂ ಟೀಂನ ಮ್ಯಾನೇಜ್ಮೆಂಟ್​ಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿತ್ತು. ಇತ್ತ ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ, ಫ್ಯಾನ್ಸ್​ ಮೀಟ್ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಗೆ ಅಪಾರ ಅಭಿಮಾನಿಗಳು ಹರಿದು ಬಂದಿದ್ದಾರೆ. ಆಗ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ನಡೆದು ಅನಾಹುತ ಆಗಿದೆ. ಇನ್ನು, ಕಾಲ್ತುಳಿತ ಸಂದರ್ಭದಲ್ಲಿ ಆಟಗಾರರು ವಿಧಾನಸೌಧದ ಕಾರ್ಯಕ್ರಮದಲ್ಲಿದ್ದರು.

ಇದನ್ನೂ ಓದಿ: ಮೃತರ ಸಂಖ್ಯೆ 11ಕ್ಕೆ ಏರಿಕೆ.. ಬಹುತೇಕರು 25 ವರ್ಷದೊಳಗಿನ ಯುವಕರು..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment