newsfirstkannada.com

ಹೆಂಡತಿ ಶವದ ಮುಂದೆಯೇ ಜೀವ ಬಿಟ್ಟ ಗಂಡ.. ಸಾವಿನಲ್ಲೂ ಒಂದಾದ ಜೋಡಿ!

Share :

17-09-2023

    ಪತ್ನಿ ಅಗಲಿಕೆಯ ನೋವಿನಿಂದ ಆಘಾತಕ್ಕೊಳಗಾಗಿದ್ದ ಪತಿ ಸಾವು

    ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಘಟನೆ

    ಮೃತ ರಂಗಸ್ವಾಮಿಯವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು!

ಮೈಸೂರು: ಪತ್ನಿ ಶವದ ಮುಂದೆಯೇ ಪತಿ ಪ್ರಾಣ ಬಿಟ್ಟಿರೋ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಮ್ಮ (75) ಮತ್ತು ರಂಗಸ್ವಾಮಿ ಅಲಿಯಾಸ್ ಎಳನೀರು ಕರಿಯಯ್ಯ (80) ಮೃತ ದುರ್ದೈವಿಗಳು.

ದಾಂಪತ್ಯ ಪ್ರೀತಿಯನ್ನು ಜೋಪಾನ ಮಾಡಿಕೊಂಡಿದ್ದ ಹಿರಿಯ ಜೋಡಿ ಸಾವಿನಲ್ಲೂ ಒಂದಾಗಿದ್ದಾರೆ. ಪತಿ ರಂಗಸ್ವಾಮಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ದಿನಗಳಿಂದ ಇವರಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ರಂಗಸ್ವಾಮಿ ಹೆಚ್ಚುದಿನ ಬದುಕುವುದಿಲ್ಲ ಎಂದು ವೈದ್ಯರು ತಿಳಿಸಿದ್ದರು.

ಇದರಿಂದ ಚಿಂತೆಗೀಡಾಗಿದ್ದ ಪತ್ನಿ ಭಾಗ್ಯಮ್ಮ ಆಸ್ಪತ್ರೆಯಿಂದ ಮೊನ್ನೆ ಮನೆಗೆ ವಾಪಸ್ಸಾಗಿದ್ದರು. ತಡ ರಾತ್ರಿ ಪತ್ನಿ ಭಾಗ್ಯಮ್ಮ ಮಲಗಿದವರು ಬೆಳಿಗ್ಗೆ ಮೇಲೇಳಲಿಲ್ಲ. ಸ್ವಾಭಾವಿಕವಾಗಿಯೇ ಮೃತಪಟ್ಟಿದ್ದರು. ಇತ್ತ ಪತ್ನಿ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಂಗಸ್ವಾಮಿ ಡಿಸ್ಟಾರ್ಜ್ ಮಾಡಿಸಿಕೊಂಡು ಮನೆಗೆ ವಾಪಸ್ಸಾಗಿದ್ದಾರೆ. ಹೆಂಡತಿಯ ಅಗಲಿಕೆಯ ನೋವಿನಿಂದ ಆಘಾತಕ್ಕೊಳಗಾಗಿದ್ದ ರಂಗಸ್ವಾಮಿ ಹೆಂಡತಿಯ ಶವದ ಮುಂದೆಯೇ ಪ್ರಾಣ ಬಿಟ್ಟಿದ್ದಾರೆ. ನಿನ್ನೆ ದಂಪತಿಯ ಮೃತದೇಹಗಳ ಅಂತ್ಯಕ್ರಿಯೆ ಗ್ರಾಮದ ಸ್ಮಶಾನದಲ್ಲಿ ನೆರವೇರಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಂಡತಿ ಶವದ ಮುಂದೆಯೇ ಜೀವ ಬಿಟ್ಟ ಗಂಡ.. ಸಾವಿನಲ್ಲೂ ಒಂದಾದ ಜೋಡಿ!

https://newsfirstlive.com/wp-content/uploads/2023/09/old-couple.jpg

Load More