/newsfirstlive-kannada/media/post_attachments/wp-content/uploads/2024/04/Election-2024-Died.jpg)
ಮೈಸೂರು: ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿದ ವೃದ್ಧೆ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ(90) ಮೃತ ದುರ್ದೈವಿ.
ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172 ರಲ್ಲಿ ಮತಚಲಾಯಿಸಿ ನಂತರ ಹೊರ ಬಂದ ಪುಟ್ಟಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿಂದು 14 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಉರಿ ಬಿಸಿಲಿಗೂ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಅಂದಹಾಗೆಯೇ ಇಂದು ಮೊದಲ ಹಂತದ ಮತದಾನವಾಗಿದೆ. ಈಗಾಗಲೇ ಅನೇಕರು ಮತ ಚಲಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us