ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ.. ಪ್ರಧಾನಿ ಮೋದಿ, ರಾಹುಲ್ ಗಾಂಧಿಯಿಂದ ಶುಭಾಶಯ

author-image
Bheemappa
Updated On
ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ.. ಪ್ರಧಾನಿ ಮೋದಿ, ರಾಹುಲ್ ಗಾಂಧಿಯಿಂದ ಶುಭಾಶಯ
Advertisment
  • ಓಂ ಬಿರ್ಲಾಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಅಮಿತ್ ಶಾ
  • ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪ ಮಂಡಿಸಿದ ಪ್ರಧಾನಿ ಮೋದಿ
  • ಹಂಗಾಮಿ ಸ್ಪೀಕರ್ ಕಾರ್ಯನಿರ್ವಹಿಸಿದ ಭರ್ತೃಹರಿ ಮೆಹತಾಬ್

ನವದೆಹಲಿ: ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಮರು ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ 2ನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ಮೋದಿ ಮಂಡಿಸಿದರು.

ಇದನ್ನೂ ಓದಿ:ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ.. 10 ವರ್ಷದ ಬಳಿಕ ಲೋಕಸಭೆಗೆ ಅಧಿಕೃತ ವಿಪಕ್ಷ ನಾಯಕ! 

ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ ಹೆಸರನ್ನು ಪ್ರಸ್ತಾಪ ಮಾಡಿ ಅನುಮೋದನೆ ಮಾಡಿದರು. ಆದರೆ ಎನ್​ಡಿಎ ಮೈತ್ರಿಕೂಟದ ಎಲ್ಲ ಸದಸ್ಯರು ಓಂ ಬಿರ್ಲಾ ಹೆಸರನ್ನು ಅನುಮೋದಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಬಿರ್ಲಾ ಹೆಸರನ್ನೇ ಸೂಚಿಸಿದರು. ಹಂಗಾಮಿ ಸ್ಪೀಕರ್ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿತು. ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆ ಆಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಭರ್ತೃಹರಿ ಮೆಹತಾಬ್ ಅವರು ಘೋಷಣೆ ಮಾಡಿದರು.

ಇದನ್ನೂ ಓದಿ: ತ್ರಿಶಾ ಜೊತೆ ಡೇಟಿಂಗ್ ಮಾಡ್ತಿದ್ದಾರಾ ದಳಪತಿ ವಿಜಯ್.. ಕುತೂಹಲ ಮೂಡಿಸಿದ ಇಬ್ಬರ ಫೋಟೋಸ್..!

publive-image

ಬಳಿಕ ಓಂ ಬಿರ್ಲಾ ಅವರಿಗೆ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲಾ ಸದಸ್ಯರು ಶುಭಾಶಯ ಕೋರಿದರು. ಅಧಿವೇಶನದ ಆರಂಭದಲ್ಲಿ ಹಂಗಾಮಿ ಸ್ಪೀಕರ್ ಆಯ್ಕೆಯಲ್ಲಿ ಹಿರಿಯ ಕಾಂಗ್ರೆಸ್ ಸಂಸದರನ್ನು ಕಡೆಗಣಿಸಿ ಭರ್ತೃಹರಿ ಅವರನ್ನು ನೇಮಿಸಲಾಗಿತ್ತು. 18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎನಿಂದ ಓಂ ಬಿರ್ಲಾ ಮರು ಆಯ್ಕೆಯಾಗಿದ್ದಾರೆ.


">June 26, 2024

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment