ಆನೇಕಲ್ನಲ್ಲಿ ಬೈಕ್, ಲಾರಿ ನಡುವೆ ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತದಲ್ಲಿ 7 ವರ್ಷದ ಬಾಲಕಿ ದಾರುಣ ಸಾವು
ಲಾರಿ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಅಪಘಾತ
ಆನೇಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಶಾಲಾ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರೋ ಘಟನೆ ತಾಲೂಕಿನ ಹಳೇ ಚಂದಾಪುರದಲ್ಲಿ ನಡೆದಿದೆ. ಲಕ್ಷ್ಮೀ ಪ್ರಿಯಾ ಜಾಮಿ (7) ಮೃತ ಬಾಲಕಿ.
ಮೃತ ಬಾಲಕಿಯು ತಂದೆ ಜತೆ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮಗಳನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕಿ ಲಕ್ಷ್ಮೀ ಬೈಕ್‌ನಿಂದ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ.
ಆಕೆಯ ತಂದೆ ತೇಜಸ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯು ಆಂಧ್ರಪ್ರದೇಶದ ಶ್ರೀಕಾಕುಲಂ ಮೂಲದ ತೇಜಸ್ವ ದಂಪತಿಗೆ ಸೇರಿದ ಮಗಳು. ದಂಪತಿ ಅಡಿಸೊನ್ನಟ್ಟಿ ರಸ್ತೆಯ ಗ್ರೀನ್ ಆಪಲ್ ಹೈಕ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು.
ಇನ್ನು, ಚಂದಾಪುರ ರೈಲ್ವೆ ಅಂಡರ್ ಪಾಸ್ ಕಳೆದ ಹದಿನೈದು ದಿನಗಳಲ್ಲಿ ಇದು ಮೂರನೇ ಅಪಘಾತವಾಗಿದ್ದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಜನಪ್ರತಿನಿಧಿಗಳು ಯಾರು ಕೂಡ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಕಿಡಿಕಾರುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ