ಬೆಂಗಳೂರಲ್ಲಿ ಕುಡಿದು ಅಡ್ಡಾದಿಡ್ಡಿ ಕಾರ್ ಚಾಲಕನ ಡ್ರೈವಿಂಗ್
ಹಿಂದಿನಿಂದ ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಕಾರ್!
ಕಾರ್ ಗುದ್ದಿದ ರಭಸಕ್ಕೆ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು
ಬೆಂಗಳೂರು: ಬೈಕ್, ಕಾರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಸುಬ್ರಮಣ್ಯ ನಗರದ ವಿನಯ್ (32) ಮೃತ ಬೈಕ್ ಸವಾರ.
ಕಾರ್ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿದ್ದಾನೆ. ಮೊದಲು ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಹಿಂದಿನಿಂದ ಬಂದು ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಕಾರ್ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಇನ್ನು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕಾರ್ ಚಾಲಕ ಹರಿನಾಥ್ನನ್ನು ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಐಷಾರಾಮಿ ಕಾರಿನಲ್ಲಿ ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಅಪ್ರಾಪ್ತ.. ಸ್ಥಳದಲ್ಲೇ ಇಬ್ಬರು ಸಾವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ