50 ವರ್ಷದ ರುದ್ರಪ್ಪ ಚಿಕಿತ್ಸೆ ಫಲಿಸದೇ ಸಾವು
ಬಸವೇಶ್ವರ ಆಸ್ಪತ್ರೆಯಲ್ಲಿ ರುದ್ರಪ್ಪ ನಿಧನ
ನಗರಸಭೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ದುರಂತ ಪ್ರಕರಣದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ರುದ್ರಪ್ಪ (50), ಪಾರ್ವತಮ್ಮ (60) ಸಾವನ್ನಪ್ಪಿದ್ದಾರೆ.
ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ರುದ್ರಪ್ಪ ಪಡೆಯುತ್ತಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರುದ್ರಪ್ಪ, ಕೊನೆಗೂ ಬದುಕಿ ಬರಲಿಲ್ಲ. ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆ ನಿವಾಸಿಯಾಗಿದ್ದಾನೆ.
ನಿನ್ನೆಯವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದರು. ಮಂಜುಳಾ(23), ರಘು(25), ಪ್ರವೀಣ(25) ಮೃತಪಟ್ಟಿದ್ದರು. ಇದೀಗ ಅದೇ ಗ್ರಾಮದ ರುದ್ರಪ್ಪ ಮತ್ತು ಪಾರ್ವತಮ್ಮ ಅನ್ನೋರು ಕೂಡ ಸಾವನ್ನಪ್ಪಿದ್ದಾರೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡವರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು ವಿಷದ ನೀರನ್ನು 130ಕ್ಕೂ ಹೆಚ್ಚು ಮಂದಿ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಪ್ರಕರಣ ಸಂಬಂಧ ಆರೋಪಿಗಳು ಮತ್ತು ನಗರಸಭೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ