newsfirstkannada.com

ಕರಾವಳಿ ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ; ಇಂದಿನಿಂದ ಎಷ್ಟು ದಿನ?

Share :

Published May 1, 2024 at 8:09pm

  ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ

  ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್​ನ್ಯೂಸ್​​

  ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಮಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿ ಮಂದಿಗೆ ರಾಜ್ಯ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ 1 ವಾರಗಳ ಕಾಲ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು ರಾತ್ರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ. ನಾಳೆ ಬೆಳಿಗ್ಗೆಯಿಂದ ಗಾಳಿ ಸಹಿತ ಭಾರಿ ಮಳೆ ಆರ್ಭಟಿಸಲಿದೆ. ಕಳೆದ ಒಂದು ವಾರದಿಂದ ಆಗಾಗ ಸಣ್ಣ ಪ್ರಮಾಣದಲ್ಲಿ ಸುರಿಯುತ್ತಿರೋ ಮಳೆ ಜೋರಾಗಿ ಇರಲಿದೆ. ಇಷ್ಟೇ ಅಲ್ಲ ಕರಾವಳಿ ಹಾಗೂ ಮಲೆನಾಡು ತಾಲ್ಲೂಕುಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 1 ವಾರ ಮಳೆಯಾಗಲಿದೆ. ಹಾಗಾಗಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರೋ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮಳೆಗಾಗಿ ಇನ್ನೆಷ್ಟು ದಿನ ಕಾಯಬೇಕು? ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರಾವಳಿ ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ; ಇಂದಿನಿಂದ ಎಷ್ಟು ದಿನ?

https://newsfirstlive.com/wp-content/uploads/2024/05/Rain-Mangalore.jpg

Load More