/newsfirstlive-kannada/media/post_attachments/wp-content/uploads/2024/07/krs-2.jpg)
ಮಂಡ್ಯ: ಮೊನ್ನೆಯಷ್ಟೇ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂನ ಒಳಹರಿವು ಹೆಚ್ಚಾಗಿತ್ತು. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ಆಗ ದಿಢೀರನೇ 16 ಸಾವಿರ ಕ್ಯೂಸೆಕ್‌ಗೆ ಒಳಹರಿವು ಏರಿಕೆಯಾಗಿತ್ತು.
ಇದನ್ನೂ ಓದಿ: ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿದ್ದ.. ಈಗ 2500 ಕೋಟಿ ಒಡೆಯ.. ಯಾರು ಈ ಸ್ಟಾರ್ ಹೀರೋ?
ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದೆ. ಹೀಗಾಗಿ ಕೆಆರ್‌ಎಸ್ ಡ್ಯಾಂನ ಒಳಹರಿವು ಕುಗ್ಗಿದೆ. ಇನ್ನೂ ಈ ನಡುವೆ 13,359 ಕ್ಯೂಸೆಕ್‌ಗೆ ಡ್ಯಾಂ ಒಳಹರಿವು ಇಳಿದಿದೆ. ಸದ್ಯ ಕೆಆರ್‌ಎಸ್ ಡ್ಯಾಂ ಭರ್ತಿಗೆ ಕೇವಲ 5 ಅಡಿ ಮಾತ್ರ ಬೇಕಿದೆ. ಹೀಗಾಗಿ ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಜೂನ್ ತಿಂಗಳಿನಲ್ಲಿಯೇ ಭರ್ತಿಯಾದ್ರೆ ಹೊಸ ದಾಖಲೆ ನಿರ್ಮಾಣವಾಗುತ್ತದೆ.
ಆದ್ರೆ ಈ ಹೊತ್ತಿನಲ್ಲಿ ಒಳಹರಿವು ಕಡಿಮೆಯಾಗಿದೆ. 124.80 ಅಡಿಯ ಕೆಆರ್‌ಎಸ್ ಡ್ಯಾಂ 119.40 ಅಡಿಯಷ್ಟು ಭರ್ತಿಯಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 42.291 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನಿಂದ 1,664 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ