/newsfirstlive-kannada/media/post_attachments/wp-content/uploads/2024/06/VIRAT_KOHLI-11.jpg)
2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ವಿಶ್ವಕಪ್ ಗೆದ್ದ ಕೂಡಲೇ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇನ್ನು, ಟಿ20 ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿರ್ಗಮನ ಟೀಮ್ ಇಂಡಿಯಾ ಸಾಕಷ್ಟು ಸವಾಲುಗಳನ್ನು ತಂದೊಡ್ಡಿದೆ. ಕೊಹ್ಲಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದಂತೆ ಅವರ ಪರಂಪರೆ ಮುನ್ನಡೆಸುವ ಮತ್ತೋರ್ವ ಆಟಗಾರ ಅನ್ನೋ ಪ್ರಶ್ನೆಗಳು ಎದ್ದಿವೆ. ಟಿ20 ತಂಡದಲ್ಲಿ ಕೊಹ್ಲಿ ಸ್ಥಾನ ತುಂಬಬಲ್ಲ ಆಟಗಾರು ಯಾರು ಅನ್ನೋದಕ್ಕೆ ಉತ್ತರ ಇಲ್ಲಿದೆ.
ಕೊಹ್ಲಿ ಸ್ಥಾನ ತುಂಬಬಲ್ಲ ಏಕೈಕ ಆಟಗಾರ ರಜತ್ ಪಾಟಿದಾರ್!
ಯೆಸ್, ಕೊಹ್ಲಿ ಸ್ಥಾನ ತುಂಬಬಲ್ಲ ಯುವ ಬ್ಯಾಟರ್ ರಜತ್ ಪಾಟಿದಾರ್. ಇವರು ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಜತೆಗೆ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದಲೇ ಹೆಸರು ಮಾಡಿದವರು. ಯಾರ ವಿರುದ್ಧವೇ ಆಗಲಿ ಯಾವುದೇ ಸಂದರ್ಭದಲ್ಲೂ ವಿಭಿನ್ನ ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಪಾಟಿದಾರ್ ಅವರಿಗಿದೆ. ಐಪಿಎಲ್‌ನಲ್ಲಿ ರಜತ್ ಪಾಟಿದಾರ್ ಪ್ರದರ್ಶನಗಳು ಆಯ್ಕೆಗಾರರಗಮನ ಸೆಳೆದಿದೆ. ವಿರಾಟ್ ಕೊಹ್ಲಿ ನಂತರ ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ರಜತ್ ಸ್ಥಾನ ಪಡೆಯಬಹುದು.
ಇದನ್ನೂ ಓದಿ:ಗಂಭೀರ್ ಕೋಚ್ ಆಗೋ ಮುನ್ನವೇ ಅಚ್ಚರಿ ಬೆಳವಣಿಗೆ; ಕೊಹ್ಲಿ, ರೋಹಿತ್ ನಿವೃತ್ತಿಗೆ ಅಸಲಿ ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ