ಹಾಸನಾಂಬೆ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಹರಿದು ಬರುತ್ತಿರೋ ಭಕ್ತರು
ದೀಪಾವಳಿ ರಜೆಗಳಿಂದ ಮತ್ತಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಬಹುದು
ಘಟನೆ ಹಿನ್ನೆಲೆಯಲ್ಲಿ ಎಚ್ಚೆತ್ತಕೊಂಡ ಜಿಲ್ಲಾಡಳಿತ, ಆಡಳಿತ ಮಂಡಳಿ
ಹಾಸನ: ಶಕ್ತಿ ದೇವತೆ ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು 4 ದಿನ ಇರುವಾಗಲೇ ಎಲ್ಲ ಶಿಷ್ಟಾಚಾರ ದರ್ಶನವನ್ನು ದೇವಾಲಯ ಆಡಳಿತ ಮಂಡಳಿ ರದ್ದು ಮಾಡಿದೆ. ಈ ಬಗ್ಗೆ ಹಾಸನಾಂಬೆ ದೇವಾಲಯ ಆಡಳಿತಾಧಿಕಾರಿ ಹಾಗೂ ಹಾಸನ ಉಪ ವಿಭಾಗ ಅಧಿಕಾರಿ ಮಾರುತಿ ಅವರು ಆದೇಶ ಹೊರಡಿಸಿದ್ದಾರೆ.
ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದು ದೊಡ್ಡದಾದ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ದೇವಾಲಯದ ಗರ್ಭಗುಡಿಗೆ ಅರ್ಚಕರನ್ನು ಹೊರತಪಡಿಸಿ ಯಾರನ್ನೇ ಆಗಲಿ ಬಿಡುವುದಿಲ್ಲ. ಬೇರೆ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು ಡಿಸಿ, ಎಸ್ಪಿ ಹಾಗೂ ಉಸ್ತುವಾರಿ ಸಚಿವರ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು ಬಳಿಕ ಆಡಳಿತಾಧಿಕಾರಿ ಆದೇಶ ನೀಡಿದ್ದಾರೆ.
ಹಾಸನಾಂಬೆ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯುತ್ತಿದ್ದು ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ದರ್ಶನಕ್ಕಾಗಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ಧರ್ಮ ದರ್ಶನದ ಸಾಲಿನಲ್ಲಿ ಅಧಿಕ ಭಕ್ತರು ಬರುತ್ತಿರುವುದರಿಂದ ಭಕ್ತಾದಿಗಳ ಭದ್ರತೆ ಹಾಗೂ ಸುರಕ್ಷತಾ ದೃಷ್ಟಿಯಿಂದ ಶಿಷ್ಟಾಚಾರ ದರ್ಶನದ ವ್ಯವಸ್ಥೆಯನ್ನು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದು ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಕರೆಂಟ್ ಶಾಕ್ ಅವಘಡದಿಂದ 17 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಹಬ್ಬಕ್ಕೆ ರಜೆಗಳು ಇರುವುದರಿಂದ ಮತ್ತಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಇನ್ನೂ 4 ದಿನ ಹಾಸನಾಂಬೆ ದರ್ಶನೋತ್ಸವ ಬಾಕಿ ಇರುವಾಗಲೇ ಅಧಿಕಾರಿಗಳು ಈ ಖಡಕ್ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ