/newsfirstlive-kannada/media/post_attachments/wp-content/uploads/2024/04/rajnath-singh.jpg)
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ಮೇಲೆ ಭಾರತ ಆಪರೇಷನ್ ಸಿಂಧೂರ ನಡೆಸಿದೆ. 25 ನಿಮಿಷದ ಪ್ರತೀಕಾರದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನ ಉಗ್ರರ ನೆಲೆಗಳು ಪೀಸ್, ಪೀಸ್ ಆಗಿವೆ. ಆಪರೇಷನ್ ಸಿಂಧೂರ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ಬುಡಕ್ಕೆ ಬೆಂಕಿ ಹಚ್ಚಿ ಬಿಸಿ ಮುಟ್ಟಿಸಿದೆ.
ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ ನೀಡಿದೆ. ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿರೋಧ ಪಕ್ಷದ ನಾಯಕರಿಗೆ ಭಾರತೀಯ ಸೇನೆಯ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾರತದ ವೈಮಾನಿಕ ದಾಳಿಯಲ್ಲಿ ಕನಿಷ್ಠ 100 ಮಂದಿ ಉಗ್ರರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಅಪಪ್ರಚಾರವನ್ನು ನಂಬಬೇಡಿ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ನಾಯಕರಿಗೆ ಸ್ಪಷ್ಟಪಡಿಸಿದೆ.
/newsfirstlive-kannada/media/post_attachments/wp-content/uploads/2025/05/Operation-Sindhoor-All-Party-Meeting-1.jpg)
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಮಾತನಾಡಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಲ್ಲ. ಆದರೆ ಪಾಕ್ ಉಗ್ರರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಬಹುದು ಎಂದಿದ್ದಾರೆ. ಈ ಮೂಲಕ ಅಪರೇಷನ್ ಸಿಂಧೂರು ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಕೇಂದ್ರ ಸರ್ಕಾರ ಸರ್ವಪಕ್ಷ ನಾಯಕರ ಜೊತೆ ಮಹತ್ವದ ಸಭೆ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ನಾಯಕರಿಗೆ ಆಪರೇಷನ್ ಸಿಂಧೂರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ ನಡ್ಡಾ ಅವರು ಮಾಹಿತಿ ನೀಡಿದ್ದಾರೆ.
/newsfirstlive-kannada/media/post_attachments/wp-content/uploads/2025/05/Operation-Sindhoor-All-Party-Meeting.jpg)
ಈ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರದ ಬಗ್ಗೆ ಎಲ್ಲಾ ಪಕ್ಷಗಳು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಭಯೋತ್ಪಾದನೆಯ ವಿರುದ್ಧದ ಸಮರದಲ್ಲಿ ಭಾರತದ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us